ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಒಟ್ಟು 2871 ಕೇಂದ್ರಗಳಲ್ಲಿ ಎಕ್ಸಾಂ ನಡೆಯಲಿದೆ.
ಈ ವರ್ಷ 9,02,889 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಆ ಪೈಕಿ 8,12,855 ಹೊಸಬರು ಪರೀಕ್ಷೆ ಬರೆಯಲಿದ್ದಾರೆ. 62,845 ರಿಪೀಟರ್ಸ್ ಮತ್ತು 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕದ ಹಿನ್ನೆಲೆ ತಡೆಗೆ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಮೊಬೈಲ್ ನಿರ್ಬಂಧ
ಸ್ಮಾಟ್ ವಾಚ್, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ಪೂರ್ಣ ನಿಷೇಧ
ಪರೀಕ್ಷಾ ಕೇಂದ್ರದಲ್ಲಿ ಅನಧಿಕೃತ ವ್ಯಕ್ತಿಗಳಿಂದ ಚಿತ್ರೀಕರಣಕ್ಕೆ ನಿಷೇಧ
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತು ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದು ನಿಷೇಧ
ಯಾವುದೇ ವಿಷಯಗಳ ಮಾಹಿತಿ ರವಾನಿಸುವುದು ನಿಷೇಧ
ಪರೀಕ್ಷೆಯನ್ನು ವೆಬ್ ಕಾಸ್ಟಿಂಗ್ ಮೂಲಕ ಮಾನಿಟರ್
ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಕಡ್ಡಾಯ

































