ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್(BPNL) ರಾಷ್ಟ್ರೀಯ ಸರ್ಕಾರೇತರ ಸಂಸ್ಥೆಯಾಗಿದ್ದು ಇಲ್ಲಿ ಖಾಲಿ ಇರುವ 2248 ಸಣ್ಣ ಉದ್ಯಮ ವಿಸ್ತರಣೆ ಅಧಿಕಾರಿ ಮತ್ತು ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
ಇಲಾಖೆ ಹೆಸರು -ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (BPNL)
ಹುದ್ದೆಗಳ ಹೆಸರು- ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು -2248
ಅರ್ಜಿ ಸಲ್ಲಿಸುವ ಬಗೆ- ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ – ಭಾರತಾದ್ಯಂತ
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು SSLC (10th), ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಹುದ್ದೆಗಳಿಗೆ ಅನುಗುಣವಾಗಿ ವೇತನ ನಿಗದಿಪಡಿಸಲಾಗಿದೆ.
ಸಣ್ಣ ಉದ್ಯಮ ವಿಸ್ತರಣೆ ಅಧಿಕಾರಿ – 40,000/-
ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ – 30,500/-
ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿರುತ್ತದೆ.
ಸಣ್ಣ ಉದ್ಯಮ ವಿಸ್ತರಣೆ ಅಧಿಕಾರಿ ಹುದ್ದೆ: 944/-
ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ ಹುದ್ದೆ: 826/-
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ನವೆಂಬರ್ 2024
https://pay.bharatiyapashupalan.com/onlinerequirment#