ಬೆಂಗಳೂರು : ರಾಜ್ಯದಲ್ಲಿ ಎಸ್ಎಸ್ಎಲ್ಸಿ – 01ರ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಕೂಡ ಬಾಲಕಿಯರೇ ಮೇಲೂಗೈ ಸಾಧಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀಯವರು ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ.
ಇವರ ಜೊತೆಗೆ ನಿರ್ದೇಶಕ ಗೋಪಾಲಕೃಷ್ಣ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ರಿತೇಶ್ ಕುಮಾರ್ ಸಿಂಗ್ ಜೊತೆಯಾಗಿ ಪತ್ರಿಕಾಗೋಷ್ಠಿ ನಡೆಸಿ ರಿಸಲ್ಟ್ ಅನೌನ್ಸ್ ಮಾಡಿದ್ದಾರೆ. ಈ ಬಾರಿ ಒಟ್ಟು 8.59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ತೇರ್ಗಡೆಯಾದ ವಿದ್ಯಾರ್ಥಿಗಳು ಸಂಖ್ಯೆ 6,31,204. ಲಿಂಗವಾರು ಒಟ್ಟಾರೆ ಫಲಿತಾಂಶ ಬಾಲಕರು : 2,87,416(65.90%) ಬಾಲಕಿಯರು : 3,43,788(81.11%) ರಾಜ್ಯದಲ್ಲಿ ಶೇಕಡಾವಾರು ಪ್ರಥಮ ಸ್ಥಾನ ಪಡೆದ ಜಿಲ್ಲೆ 1)ಉಡುಪಿ ಪ್ರಥಮ ಸ್ಥಾನ(94%) 2)ದಕ್ಷಿಣ ಕನ್ನಡ ,ದ್ವೀತಿಯ ಸ್ಥಾನ(92.12%) 3)ಶಿವಮೊಗ್ಗ (88.67%) ರಾಜ್ಯದಲ್ಲಿ ಶೇಕಡಾವಾರು ಕೊನೆ ಸ್ಥಾನ ಪಡೆದ ಜಿಲ್ಲೆ 1)ಯಾದಗಿರಿ 50.59%