ಬೆಂಗಳೂರು :ಬಿಜೆಪಿಯ ಯಶವಂತಪುರದ ಶಾಸಕ ಎಸ್‌ಟಿ ಸೋಮಶೇಖರ್ ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಬಿಜೆಪಿ ಕೇಂದ್ರ ಸಚಿವ ಸಮಿತಿಯು ಆದೇಶ ಹೊರಡಿಸಿದೆ.
ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್ ಕೊನೆಯಲ್ಲಿ ಇಬ್ಬರಿಗೂ ಶೋಕಾಸ್ ನೋಟಿಸ್ ನೀಡಲಾಗಿತ್ತು. ಶೋಕಾಸ್ ನೋಟಿಸ್‌ಗೆ ಸರಿಯಾದ ಉತ್ತರ ನೀಡದ ಹಿನ್ನಲೆ ಇಬ್ಬರನ್ನೂ ಬಿಜೆಪಿ ಉಚ್ಚಾಟನೆ ಮಾಡಿದೆ.
ಇಬ್ಬರು ನಾಯಕರು ಬಹಿರಂಗವಾಗಿ ಕಾಂಗ್ರೆಸ್ ಸಭೆಯಲ್ಲಿ ಭಾಗಿಯಾಗುತ್ತಿದ್ದರು. ಅಷ್ಟೇ ಅಲ್ಲದೇ ಪಕ್ಷದ ನಾಯಕರ ವಿರುದ್ಧವೇ ಹೇಳಿಕೆ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಇಬ್ಬರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಂಡಿದೆ.