ಬೆಂಗಳೂರು: ಹೃದಯಾಘಾತದ ಬಗ್ಗೆ ಆತಂಕ ಬೇಡ. ಸರಿಯಾದ ನಿದ್ದೆ, ದೈಹಿಕ ವ್ಯಾಯಾಮ ಮಾಡುವುದರ ಜೊತೆಗೆ ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಿ. ಹೃದಯ ಸಂಬಂಧಿ ಸಮಸ್ಯೆಗಳಿದ್ದರೆ ಆಗಾಗ್ಗೆ ತಪಾಸಣೆ ಮಾಡಿಸಿಕೊಳ್ಳಿ. ಇಲ್ಲವಾದಲ್ಲಿ ವರ್ಷಕ್ಕೊಮ್ಮೆ ಹೃದಯದ ತಪಾಸಣೆ ಮಾಡಿಸಿಕೊಳ್ಳಿ ಎಂದು ರಾಜ್ಯ ಸರ್ಕಾರ ಸಲಹೆ ನೀಡಿದೆ.
ರಾಜ್ಯದಲ್ಲಿ ಹೃದಯಾಘಾತದಿಂದ ಮರಣವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕರಿಗೆ ಕಿವಿಮಾತು ಹೇಳಿರುವುದಾಗಿದೆ.
ಹೃದಯಾಘಾತದ ಭಯಕ್ಕೆ ತಪಾಸಣೆ ಮಾಡಿಸಿಕೊಳ್ಳುವವರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಈ ಸಲಹೆ ನೀಡಲಾಗಿದೆ. ಹೃದಯಾಘಾತಕ್ಕೆ ಕೊರೋನಾ ಲಸಿಕೆ ಕಾರಣವಲ್ಲ. ಲಸಿಕೆ ಬಗ್ಗೆ ಸಂದೇಹ ಬೇಡ. ಹೃದಯದ ತಪಾಸಣೆಗೆ ಹೆಚ್ಚಿನ ಜನರು ಬರುತ್ತಿರುವುದರಿಂದ ಆಸ್ಪತ್ರೆಗಳಿಗೆ ಅನಗತ್ಯ ಒತ್ತಡ ಬೀಳುತ್ತಿರುವುದಾಗಿಯೂ ಸರ್ಕಾರ ತಿಳಿಸಿದೆ.
ರಸ್ತೆ ಬದಿ ಆಹಾರ, ಅದನ್ನು ತಯಾರಿಸುವ ವಿಷಯಕ್ಕೆ ಸಂಬಂಧಿಸಿದ ಹಾಗೆಯೂ ಸರ್ಕಾರ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುತ್ತದೆ ಎಂದು ಮೂಲಗಳು ಹೇಳಿವೆ.