ಬೆಂಗಳೂರು: ಎಣ್ಣೆ ಪ್ರಿಯರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಕರ್ನಾಟಕ ಸರ್ಕಾರವು ಎಲ್ಲಾ ಬಿಯರ್‌ಗಳ ದರ ಏರಿಕೆಗೆ ಮುಂದಾಗಿದೆ.
ಎಲ್ಲಾ ಬಿಯರ್‌ಗಳ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ 10 ರಷ್ಟು ಹೆಚ್ಚಳ ಮಾಡಲು ನಿರ್ಧರಿಸಿದೆ. ಮಧ್ಯಮ ಶ್ರೇಣಿಯ ಮತ್ತು ಅಗ್ಗದ ಸ್ಥಳೀಯ ಬಿಯರ್‌ಗಳಿಗೆ ಪ್ರತಿ ಬಾಟಲ್ಗೆ 5 ರೂಪಾಯಿ ವರೆಗೆ ದರ ಏರಿಕೆಯಾಗುವ ಸಾಧ್ಯತೆ ಇದೆ.
ಬೆಲೆ ಏರಿಕೆಯು ಬ್ರ್ಯಾಂಡ್‌ನಿಂದ ಬ್ರ್ಯಾಂಡ್‌ಗೆ ವ್ಯತ್ಯಸ್ತವಾಗಿರಲಿದೆ. ಪ್ರಸ್ತಾವಿತ ಬಿಯರ್ ತೆರಿಗೆ ದರ ಹೆಚ್ಚಳದೊಂದಿಗೆ, ಮೂರು ವರ್ಷಗಳ ಅವಧಿಯಲ್ಲಿ ಬಿಯರ್ ಮೇಲಿನ ತೆರಿಗೆಯನ್ನು ಮೂರನೇ ಬಾರಿ ಹೆಚ್ಚಳ ಮಾಡಿದಂತಾಗಲಿದೆ.
2025 ರ ಜನವರಿ 20 ರಂದು ಮತ್ತೊಂದು ಪರಿಷ್ಕರಣೆ ಮಾಡಲಾಗಿತ್ತು. ಆಗ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ 195 ಕ್ಕೆ ಅಥವಾ ಪ್ರತಿ ಬಲ್ಕ್ ಲೀಟರ್‌ಗೆ ರೂ 130 ರ ವರೆಗೆ ಹೆಚ್ಚಳ ಮಾಡಿತ್ತು. ಇದೀಗ ಮತ್ತೆ ತೆರಿಗೆ ಹೆಚ್ಚಳ ಮಾಡಿದೆ