ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಇವರ ವತಿಯಿಂದ 2025-26 ನೇ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ)ಯಡಿ ನಿರುದ್ಯೋಗ ಯುವಕ-ಯುವತಿಯರಿಗೆ ರಾಷ್ಟ್ರೀಕೃತ ಬ್ಯಾಂಕುಗಳ ಮುಖಾಂತರ ಆರ್ಥಿಕ ಸಾಲ ಸೌಲಭ್ಯ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳು www.kviconline.gov.in ವೆಬ್ಸೈಟ್ ನಲ್ಲಿ KVIB ಏಜೆನ್ಸಿ ಲಾಗಿನ್ ಗೆ ಜಿಲ್ಲೆಯ ನಾಲ್ಕು ತಾಲೂಕಿನವರು ಅರ್ಜಿ ಸಲ್ಲಿಸಬಹುದು. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ನಂತರ ದಾಖಲಾತಿಗಳೊಂದಿಗೆ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಜಿಲ್ಲಾ ಕಛೇರಿಗೆ ನೀಡಬೇಕು.
18 ವರ್ಷ ಮೇಲ್ಪಟ್ಟ ಯಾವುದೇ ವ್ಯಕ್ತಿ ಅರ್ಜಿ ಸಲ್ಲಿಸಬಹುದು.
ರೂ.50.00 ಲಕ್ಷ ಮೇಲ್ಪಟ್ಟ ಯೋಜನಾ ವೆಚ್ಚದ ಉತ್ಪಾದನಾ ಚಟುವಟಿಕೆಗಳಿಗೆ, ಹಾಗೂ ರೂ.20.00 ಲಕ್ಷಗಳವರೆಗೆ ಯೋಜನಾ ವೆಚ್ಚದ ಸೇವಾ ಚಟುವಟಿಕೆಗಳಿಗೆ ಕನಿಷ್ಟ 8ನೇ ತರಗತಿ ಉತ್ತೀರ್ಣರಾಗಿರಬೇಕು.
ಯಾವುದೇ ಆದಾಯದ ಮಿತಿ ಇರುವುದಿಲ್ಲ.
ಸಾಮಾನ್ಯ ವರ್ಗದ ಪುರುಷ ಉದ್ಯಮಶೀಲರಿಗೆ ಗ್ರಾಮೀಣ ಪ್ರದೇಶದಲ್ಲಿ ಯೋಜನಾ ವೆಚ್ಚದ ಶೇ.25ರಷ್ಟು ಹಾಗೂ ವಿಶೇಷ ವರ್ಗದ ಉದ್ಯಮಶೀಲರಿಗೆ ಯೋಜನಾ ವೆಚ್ಚದ ಶೇ.35ರಷ್ಟು ಸಹಾಯಧನ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂರವಾಣಿ ಸಂಖ್ಯೆ:9480825612 ಇವರನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.