ಚಿತ್ರದುರ್ಗ : ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಆರೆ ಅಲೆಮಾರಿ ಜನಾಂಗಗಳ ಒಕ್ಕೂಟ (ರಿ.) ಬೆಂಗಳೂರು ಇದರ ವತಿಯಿಂದ ತಾ-19-1-2025 ಭಾನುವಾರ ದಾವಣಗೆರೆ ವಿದ್ಯಾನಗರದ ಕುವೆಂಪು ಕನ್ನಡ ಭವನದಲ್ಲಿ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ರಾಜ್ಯ ಮಟ್ಟದ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ, ಪ್ರತಿಭಾ ಪುರಸ್ಕಾರ, ಸಂತ ಸಂದೇಶ, ವಿಚಾರ ಗೋಷ್ಟಿ ಸಾಧಕರಿಗೆ ‘ಸಾಧಕ ರತ್ನ” ಸನ್ಮಾನ ಕಾರ್ಯಕ್ರಮಗಳು ನಡೆಯಲಿವೆ ಎಂದು ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಆರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಲಕ್ಷ್ಮೀಕಾಂತ ಯಾದವ್ ತಿಳಿಸಿದ್ದಾರೆ.
ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಮಾಹಿತಿ ನೀಡಿದ ಅವರು ರಾಜ್ಯ ಮಟ್ಟದ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವದ ಭಿತ್ತಿ ಪತ್ರವನ್ನು ಬಿಡುಗಡೆ ಮಾಡಿ ಮಾತನಾಡಿ ಈ ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ತೋಟಗಾರಿಕೆ ಸಚಿವರು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಹಿಂದುಳಿದ ವರ್ಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ದಾವಣಗೆರೆ ಸಂಸದರಾದ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ, ದಾವಣಗೆರೆ ಶಾಸಕರಾದ ಶಾಮನೂರು ಶಿವಶಂಕರಪ್ಪ ಭಾಗವಹಿಸಲಿದ್ದಾರೆ, ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಡಿ. ಟಿ. ಶ್ರೀನಿವಾಸ್ ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ.
ಹರಿಹರ ವಿಧಾನ ಸಭಾ ಶಾಸಕರಾದ ಬಿ. ಪಿ. ಹರೀಶ್ ಒಕ್ಕೂಟದ ಕ್ಯಾಲೆಂಡರ್ ಬಿಡುಗಡೆ ಮಾಡಲಿದ್ದಾರೆ, ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಒಕ್ಕೂಟದ ರಾಜ್ಯಾಧ್ಯಕ್ಷರಾದ ಪ್ರಕಾಶ್ ಎಮ್. ವಹಿಸಲಿದ್ದಾರೆ ಉಪಾಧ್ಯಕ್ಷರಾದ ಬಿ. ಕೆ. ನಾರಾಯಣ ಸ್ವಾಮಿ,. ವಿಧಾನ ಪರಿಷತ್ ಸದಸ್ಯರಾದ ನಾಗರಾಜ್ ಯಾದವ್, ಮಾಜಿ ಸಚಿವರಾದ ಎಮ್. ಪಿ. ರೇಣುಕಾಚಾರ್ಯ, ಬಿಜೆಪಿ ದಾವಣಗೆರೆ ಜಿಲ್ಲಾ ಅಧ್ಯಕ್ಷರಾದ ರಾಜಶೇಖರ ನಾಗಪ್ಪ, ಯಶವಂತರಾವ್ ಜಾದವ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಿ. ಮಹಾಲಿಂಗಪ್ಪ ಕೊಪ್ಪಳ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ತುಕಾರಾಮ ಸೂರ್ವೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಭಾ ಕಾರ್ಯಕ್ರಮದ ನಂತರ ಶರಣರು ಸಂತ ಸಂದೇಶ ಕಾರ್ಯಕ್ರಮದಲ್ಲಿ ದಾವಣಗೆರೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಬೆಂಗಳೂರು ನೆಲಮಂಗಲದ ಶ್ರೀ ವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಶ್ರೀ ಬಸವರಾಮಾನಂದ ಮಹಾಸ್ವಾಮೀಜಿ, ಬೆಂಗಳೂರು ಆಂಧ್ರಹಳ್ಳಿ ಶ್ರೀ ಗುರು ರಂಗಸ್ವಾಮಿ ಆಶ್ರಮ ದೊಂಬಿದಾಸರ ಸಮುದಾಯದ ಶ್ರೀ ಕರುಣಾಕರ ಸ್ವಾಮಿ, ಹಂಡಿಬಡಂಗನಾಥ ಮಠದ ಶ್ರೀ ಸಾಗರನಾಥಜೀ, ಬೀದರ್ ಹುಮ್ನಾಬಾದ್ ದುಮ್ಮನ್ಸೂರ್ ಹೆಳವ ಸಮಾಜ ಮುಕ್ತಿನಾಥ ಜನಕಲ್ಯಾಣ ಟ್ರಸ್ಟ್ ಗುರುಪೀಠದ ಶ್ರೀ ಶಂಕರಲಿಂಗ ಸ್ವಾಮೀಜಿಗಳು, ಅತೀ ಹಿಂದುಳಿದ ಮಠಾಧೀಶರ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಛಲವಾದಿ ಮಹಾಸಂಸ್ಥಾನ ಚಿತ್ರದುರ್ಗದ ಶ್ರೀ ಬಸವನಾಗಿದೇವ ಸಂದೇಶ ನೀಡಲಿದ್ದಾರೆ
ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯದ ಉಪನ್ಯಾಸಕರು ಎನ್.ಎಸ್.ಎಸ್ ವಿಭಾಗದ ಸಂಯೋಜನಾ ಧಿಕಾರಿಗಳಾದ ಡಾ. ಶುಭಾ ಮರವಂತೆಯವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಬದುಕು ಮತ್ತು ಭವಿಷ್ಯದ ಚಿಂತನೆಗಳು ಎಂಬ ವಿಷಯದ ಬಗ್ಗೆ ವಿಚಾರ ಗೋಷ್ಠಿ ನಡೆಯಲಿದೆ ನಿವೃತ್ತ ಆಯ್ಕೆಯ ಶ್ರೇಣಿ ಗ್ರಂಥಪಾಲಕರು ಅಲೆಮಾರಿ ಬದುಕಿನ ಬಗ್ಗೆ ಕುವೆಂಪು ವಿಶ್ವವಿದ್ಯಾನಿಲಯದ ಸಮಾಜ ಶಾಸ್ತ್ರ ಅಧ್ಯಯನದ ಡಾ. ವಿಮೋಚನಾ ಅಲೆಮಾರಿ ಜನರ ಭವಿಷ್ಯದ ಚಿಂತನೆಗಳ ಬಗ್ಗೆ ವಿಷಯ ಮಂಡನೆ ಮಾಡಲಿದ್ದಾರೆ.
ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ರಾಜ್ಯ ಮಟ್ಟದ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ನಡೆಯಲಿದ್ದು ಇದರಲ್ಲಿ 35% ಕ್ಕಿಂತ ಹೆಚ್ಚು ಅಂಕಗಳಿಸಿದ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಎಸ್. ಎಸ್. ಎಲ್. ಸಿ ಮತ್ತು ಪಿ. ಯು. ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ‘ಸಾಧಕ ರತ್ನ” ಪ್ರಶಸ್ತಿ ವಿವಿಧ ಸಾಂಸ್ಕೃತಿಕ ಮನೋರಂಜನ ಕಾರ್ಯಕ್ರಮಗಳು ನಡೆಯಲಿದೆ.
ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರತಾಪ್ ಕುಮಾರ್ ಒ ಜ್ಯೋಗಿ ಮಾತನಾಡಿ ಈ ಕಾರ್ಯಕ್ರಮದಲ್ಲಿ ನಮ್ಮ ಚಿತ್ರದುರ್ಗ ಜಿಲ್ಲೆಯಿಂದ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದಲ್ಲಿ ಬರುವ 46 ಜಾತಿಗಳ ನೂರಾರು ಜನರು ಭಾಗವಹಿಸಲಿದ್ದಾರೆ. ಇದರಲ್ಲಿ ಚಿತ್ರದುರ್ಗದ ರವಿಕುಮಾರ್, ಧನಂಜಯ, ಯಶೋಧರ ಹಾಗೂ ಸುಧಾಕರ ಈ ನಾಲ್ವರಿಗೆ ಸನ್ಮಾನ ಮಾಡಲಾಗುವುದು ಎಂದರು.
ಗೋಷ್ಟಿಯಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಗೌರವಾಧ್ಯಕ್ಷರಾದ ರಾಮು ಗೋಸಾಯಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರವಿದಾಸರ್, ರಾಜು ಉಪಾಧ್ಯಕ್ಷರಾದ ಜ್ಯೋತಿ ದಾಸರ್, ಅಭೀಷೇಕ್, ಹೇಮಣ್ಣ, ಭಾಗವಹಿಸಿದ್ದರು.