ಶಿವಮೊಗ್ಗ: ಕಾಲೇಜ್‌ವೊಂದರಲ್ಲಿ ಲೋ ಬಿಪಿ ಸಮಸ್ಯೆಯಿಂದಾಗಿ ಮೂರ್ಛೆ ತಪ್ಪಿ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ನಂಜಪ್ಪ ಲೇಔಟ್‌ನಲ್ಲಿರುವ ಇಂಪಿರಿಯಲ್ ಕಾಲೇಜಿನಲ್ಲಿಯೇ ಈ ಒಂದು ದುರ್ಘಟನೆ ಸಂಭವಿಸಿದ್ದು, ದ್ವಿತೀಯ ಪಿಯುಸಿ ಓದುತ್ತಿದ್ದ ಸಾಯಿರಾಬಾನು (17) (ಹೆಸರು ಬದಲಾಯಿಸಲಾಗಿದೆ) ಎಂಬ ಯುವತಿ ಸಾವು ಕಂಡಿದ್ದಾಳೆ.
ಪ್ರೌಢ ಶಾಲೆಯ ಶಿಕ್ಷಕರು ಕಾಲೇಜಿಗೆ ಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ಮಾತನಾಡಿಸಲು ವಿದ್ಯಾರ್ಥಿನಿ ಪ್ರಿನ್ಸಿಪಾಲ್ ಕಚೇರಿಗೆ ಬಂದಿದ್ದಳು. ಆದರೆ ಲೋ ಬಿಪಿಯಿಂದ ಮೂರ್ಛೆ ತಪ್ಪಿ ಕಾಲೇಜಿನ ಪ್ರಿನ್ಸಿಪಾಲ್ ಕೊಠಡಿ ಬಳಿ ಬಿದ್ದಿದ್ದಳು.
ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಮಾರ್ಗ ಮಧ್ಯೆದಲ್ಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಈ ಯುವತಿ ಬಿದ್ದು ಸಾವನ್ನಪ್ಪಿದ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿದ್ಯಾರ್ಥಿನಿಗೆ ಲೋ ಬಿಪಿ ಸಮಸ್ಯೆ ಇದ್ದುದ್ದನ್ನು ಪೋಷಕರೇ ಒಪ್ಪಿಕೊಂಡಿದ್ದಾರೆಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.