ತುಮಕೂರು : ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಖಾಸಗಿ ವಸತಿ ಶಾಲೆಯ ಹಾಸ್ಟೆಲ್ ನಲ್ಲಿ ಕಳಪೆ ಗುಣಮಟ್ಟದ ಆಹಾರವನ್ನು ಸೇವಿಸಿ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಶೀರಾ ತಾಲೂಕಿನ ಪ್ರೆಸಿಡೆನ್ಸಿ ಖಾಸಗಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಕಳಪೆ ಗುಣಮಟ್ಟದ ಆಹಾರ ಸೇವಿಸಿದ್ದರಿಂದ ವಾಂತಿ ಭೇದಿ ಆಗಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅಸ್ವಸ್ಥರಾದಂತಹ ವಿದ್ಯಾರ್ಥಿಗಳನ್ನು ಶಿರಾ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
(ಸಾಂದರ್ಭಿಕ ಚಿತ್ರ)