ಬೆಳಗಾವಿ : ರಾಜ್ಯದಲ್ಲಿ 2023-24 ರಿಂದ ಇಲ್ಲಿಯವರೆಗೆ ಭ್ರೂಣಹತ್ಯೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 45 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಜಗದೇವ ಗುತ್ತೇದಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳ ಮೇಲೆ ತಪಾಸಣೆಗಳನ್ನು ಜಾಸ್ತಿ ಮಾಡಿರುವುದರಿಂದ ಹೆಚ್ಚಿನ ಸಂಖ್ಯೆಯ ಭ್ರೂಣ ಹತ್ಯೆ ಪ್ರಕರಣಗಳು ಕಂಡುಹಿಡಿಯಲಾಗಿದೆ. ಅಲ್ಲದೇ ಡಿಕಾಯ್ ಆಪರೇಷನ್ಗಳ ಯಶಸ್ವಿ ಕಾರ್ಯಾಚರಣೆಗಳನ್ನ ನಡೆಸಿ ಭ್ರೂಣೆ ಹತ್ಯೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ರಾಜ್ಯದಲ್ಲಿ ಇದುವರೆಗೂ ಪಿ.ಸಿ & ಪಿ.ಎನ್.ಡಿ.ಟಿ. ಕಾಯ್ದೆಯನ್ನು ಉಲ್ಲಂಘಿಸಿರುವ ಸ್ಕ್ಯಾನಿಂಗ್ ಸೆಂಟರ್ / ಮಾಲೀಕರು/ ವೈದ್ಯರ ವಿರುದ್ಧ ಒಟ್ಟು 136 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, 74 ಪ್ರಕರಣಗಳು ದಂಡವಿಧಿಸಿ ಖುಲಾಸೆಗೊಂಡಿದ್ದು, 65 ಪ್ರಕರಣಗಳು ನ್ಯಾಯಾಲಯದಲ್ಲಿ ವಿವಿಧ ಹಂತದಲ್ಲಿ ಬಾಕಿಯಿರುತ್ತದೆ ಎಂದು ತಿಳಿಸಿದರು.
