ಬೆಂಗಳೂರು ದಕ್ಷಿಣ ಎಸ್ ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 115 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದೇವಿಗೆರೆ ಕ್ರಾಸ್ ಸಮೀಪದಲ್ಲಿರುವ ಅಯಾನಾ ಖಾಸಗಿ ರೆಸಾರ್ಟ್ ನಲ್ಲಿ ತಡ ರಾತ್ರಿ ರೇವ್ ಪಾರ್ಟಿ ನಡೆಯುತ್ತಿದೆ ಎಂಬ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು.
ದಾಳಿ ವೇಳೆ 35 ಯುವತಿಯರು ಸೇರಿದಂತೆ 115 ಜನರನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲರನ್ನು ಬಂಧಿಸಿ ರಾಮನಗರದ ಜಿಲ್ಲಾ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದೆ.
































