ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಒತ್ತೆಯ ಹಿಡಿದು ಮತ್ತೊತ್ತೆಯ ಹಿಡಿಯೆ.
ಹಿಡಿದಡೆ ಬತ್ತಲೆ ನಿಲಿಸಿ ಕೊಲುವರಯ್ಯಾ.
ವ್ರತಹೀನನನರಿದು ಬೆರೆದಡೆ
ಕಾದ ಕತ್ತಿಯಲ್ಲಿ ಕೈ ಕಿವಿ ಮೂಗ ಕೊಯ್ವರಯ್ಯಾ. ಒಲ್ಲೆನೊಲ್ಲೆ ಬಲ್ಲೆನಾಗಿ, ನಿಮ್ಮಾಣೆ ನಿರ್ಲಜ್ಜೇಶ್ವರಾ.
-ಸೂಳೆಸಂಕವ್ವೆ































