ಆಮೇರಿಕಾ : ನಾಸಾದ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಮಂಗಳವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ISS) ಭೂಮಿಗೆ ಮರಳಲಿದ್ದಾರೆ.
ಸ್ಪೇಸ್‌ಎಕ್ಸ್‌ನ ಬಾಹ್ಯಾಕಾಶ ನೌಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಹೊರಟಿದೆ. ಇಬ್ಬರೂ ಗಗನಯಾತ್ರಿಗಳು ಹಿಂದಿರುಗಿದ ನಂತರ, ಒಂಬತ್ತು ತಿಂಗಳ ಬಾಹ್ಯಾಕಾಶ ಪ್ರಯಾಣವು ಕೊನೆಗೊಳ್ಳುತ್ತದೆ.
ಸುನಿತಾ ವಿಲಿಯಮ್ಸ್, ವಿಲ್ಮೋರ್ ಮತ್ತು ಇತರ ಇಬ್ಬರು ಕ್ರೂ-9 ಸದಸ್ಯರೊಂದಿಗೆ, ಸ್ಪೇಸ್‌ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಭೂಮಿಗೆ ಮರಳುತ್ತಿದ್ದಾರೆ. ಸುನಿತಾ ವಿಲಿಯಮ್ಸ್ ಮತ್ತು ವಿಲ್ಮೋರ್ ಜೂನ್ 5, 2024 ರಂದು ಭೂಮಿಯನ್ನು ಬಿಟ್ಟು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಡೆ ತೆರಳಿದ್ದರು.ಕೆಲವು ಸಮಯದವರೆಗೆ ಅಲ್ಲಿ ಇರಬೇಕಾಗಿತ್ತು. ಆದರೆ ತಾಂತ್ರಿ ದೋಷದಿಂದಾಗಿ ಅದು ವಿಳಂಬವಾಯಿತು. ನಾಸಾಗೆ ಅವರನ್ನು ಕರೆತರಲು ಸಾಧ್ಯವಾಗಲಿಲ್ಲ. ಆದರೆ ಸ್ಪೇಕ್ಸ್ ಎಕ್ಸ್ ಈ ಕಾರ್ಯವನ್ನು ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿಕೊಂಡಿದ್ದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಇಂದು ಭೂಮಿಯತ್ತ ಪ್ರಯಾಣವನ್ನು ಪ್ರಾರಂಭಿಸಿದ್ದಾರೆ. ನಾಸಾ ಪ್ರಕಾರ, ವಿಲಿಯಮ್ಸ್ ಮತ್ತು ವಿಲ್ಮೋರ್ ಭಾರತೀಯ ಕಾಲಮಾನ ಬೆಳಿಗ್ಗೆ 10:35 ಕ್ಕೆ ISS ನಿಂದ ಅನ್‌ಡಾಕ್ ಮಾಡಿ ಭೂಮಿಗೆ 17 ಗಂಟೆಗಳ ಪ್ರಯಾಣ ಮಾಡಿ ತಲುಪಲಿದ್ದಾರೆ.
ಎಲೋನ್ ಮಸ್ಕ್ ನೇತೃತ್ವದ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಎಂಬ ಬಾಹ್ಯಾಕಾಶ ನೌಕೆ ಬುಧವಾರ ಭಾರತೀಯ ಕಾಲಮಾನ ಬೆಳಿಗ್ಗೆ 3:27 ರ ಸುಮಾರಿಗೆ ಅಮೆರಿಕದ ಫ್ಲೋರಿಡಾ ರಾಜ್ಯದ ಕರಾವಳಿಯಿಂದ ಕೆಳಗೆ ಇಳಿಯಲಿದೆ.