ದಾವಣಗೆರೆ: ಸಂವಿಧಾನವೇ’ ನಮ್ಮ ರಾಷ್ಟ್ರದ ಸರ್ವೋಚ್ಚ ಕಾನೂನು, ಅದಕ್ಕೆ ಎಲ್ಲರೂ ಗೌರವಿಸಬೇಕು ಮತ್ತು ಅದರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಹೇಳಿದರು.
ಜಿಲ್ಲಾಡಳಿತದಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ 76 ನೇ ಗಣರಾಜ್ಯೋತ್ಸವÀ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಪಥಸಂಚಲನದಲ್ಲಿ ವಿವಿಧ ತುಕುಡಿಗಳಿಂದ ಗೌರವ ವಂದನೆ ಸ್ವೀಕರಿಸಿ ತಮ್ಮ ಸಂದೇಶದಲ್ಲಿ ಮಾತನಾಡಿದರು.
ಬುದ್ಧ, ಬಸವ, ಅಂಬೇಡ್ಕರ್ ಅವರ ಸದಾಶಯದಂತೆ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ತತ್ವದಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ದೊರಕಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಜಿಲ್ಲೆಯ ಜೀವನಾಡಿ ಭದ್ರಾ ಜಲಾಶಯ ತುಂಬಿರುವುದರಿಂದ ರೈತಾಪಿ ವರ್ಗದಲ್ಲಿ ಹರ್ಷ ಮನೆಮಾಡಿದೆ. ರೈತರು ಬೇಸಿಗೆ ಬೆಳೆಯ ಸಿದ್ಧತೆಯಲ್ಲಿ ತೊಡಗಿದ್ದಾರೆ. ಇದು ಅತ್ಯಂತ ಸಂತೋಷದ ವಿಷಯವಾಗಿದೆ ಎಂದರು.
ಜನಸಾಮಾನ್ಯರ ಬದುಕಿಗೆ ಆರ್ಥಿಕ ಸಬಲತೆಯೊಂದಿಗೆ, ಸಾಮಾಜಿಕ ಗೌರವ ತಂದುಕೊಡುವ ದೃಷ್ಟಿಯಿಂದ ಸರ್ಕಾರ 5 ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವಾರು ಜನಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಿ ಅನುμÁ್ಠಗೊಳಿಸುತ್ತಿದೆ. ಇದರಿಂದ ರಾಜ್ಯದಲ್ಲಿನ ಜನರ ಜೀವನ ಮಟ್ಟ ಸುಧಾರಿಸಿದೆ. ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಬೆಳವಣಿಗೆಗೆ ಉತ್ತೇಜಕವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ದೊರೆಕಿಸುವ ನಿಟ್ಟಿನಲ್ಲಿ ನುಡಿದಂತೆ ನಡೆದಿದೆ ಎಂದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಜನಸಾಮಾನ್ಯರೆಲ್ಲರಿಗೂ ಮರಳುಲಭ್ಯವಾಗುವಂತೆ ಮಾಡಲು ನದಿಪಾತ್ರದಲ್ಲಿ 24 ಮರಳಿನ ಬ್ಲಾಕ್‍ಗಳನ್ನು ಗುರುತಿಸಲಾಗಿದ್ದು ಇದರಲ್ಲಿ 4 ಬ್ಲಾಕ್ ಗಳನ್ನು ಸರ್ಕಾರಿ ಕಾಮಗಾರಿಗಳಿಗೆ ಮರಳು ನೀಡಲು ಮೀಸಲಿರಿಸಿ 20 ಬ್ಲಾಕ್‍ಗಳಲ್ಲಿ ಜನರಿಗೆ ನಿಗಧಿತ ದರದಲ್ಲಿ ಮರಳು ಸಿಗುವಂತೆ ಮಾಡಲು ಟೆಂಡರ್ ಕರೆಯಲಾಗಿದೆ. ಈ ಪ್ರಕ್ರಿಯೆ ಕೆಲವೇ ಕೆಲವೇ ದಿನಗಳಲ್ಲಿ ಪೂರ್ಣಗೊಂಡು ಜನರಿಗೆ ಮರಳು ಲಭ್ಯವಾಗಲಿದೆ ಎಂದರು.
ದಾವಣಗೆರೆ ಜಿಲ್ಲೆ ತೋಟಗಾರಿಕೆಯಲ್ಲಿ ಮುಂಚೂಣಿಯಲ್ಲಿದೆ. ಜಿಲ್ಲೆಯ ರೈತರ ಬದುಕನ್ನು ಇನ್ನಷ್ಟು ಹಸನಗೊಳಿಸಲು ಕೆರೆ ತುಂಬಿಸುವ ಯೋಜನೆ, ನಾಲೆಗಳ ದುರಸ್ಥಿ ಕೈಗೊಳ್ಳುವ ಮೂಲಕ ಕೊನೆ ಭಾಗದ ರೈತರಿಗೂ ನೀರು ಸಿಗುವಂತೆ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದರು.
ಆಕರ್ಷಕ ಪಥ ಸಂಚಲನ: 29 ತಂಡಗಳು ತಮ್ಮ ಶಿಸ್ತಿನ ಮತ್ತು ಆಕರ್ಷಕ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದವು, ಪೊಲೀಸ್ ಅಧಿಕಾರಿ ಸೋಮಶೇಖರಪ್ಪ.ಹೆಚ್.ಬಿ ಅವರು ಪಥಸಂಚಲನದ ನೇತೃತ್ವ ವಹಿಸಿದ್ದರು. ಮಹೇಶ್ ಪಾಟೀಲ್ ಆರ್.ಎಸ್.ಐ. ನೇತೃತ್ವದ ಡಿಎಆರ್ ತಂಡ, ನಾಗರಿಕ ಪೊಲೀಸ್ ತಂಡ ಇಮ್ತಿಯಾಜ್, ಗೃಹರಕ್ಷಕ ದಳದಿಂದ ಯಲ್ಲಪ್ಪ, ಅಗ್ನಿಶಾಮಕ ದಳ ಪ್ರೇಮಾನಂದ್, ಎನ್.ಸಿ.ಸಿ ಡಿ.ಆರ್.ಎಂ. ವಿಜ್ಞಾನ ಕಾಲೇಜು ಶರ್ನಿಲ್.ಡಿ.ಕೆ., ಎನ್.ಸಿ.ಸಿ ಎಆರ್‍ಜಿ ಕಾಲೇಜಿನ ಚಿನ್ಮಯ್, ಎನ್.ಸಿ.ಸಿ ಎವಿಕೆ ಮಹಿಳಾ ಕಾಲೇಜ್‍ನಿಂದ ಅಶ್ವಿನಿ ಬಾಯಿ.ಯು, ಎನ್.ಸಿ.ಸಿ ಜಿ.ಎಂ.ಐ.ಟಿ. ಕಾಲೇಜ್‍ನಿಂದ ಹರ್ಷಿತ್ ಮಲ್ಲಿಕಾರ್ಜುನ್, ಎನ್.ಸಿ.ಸಿ ಡಿಆರ್‍ಆರ್ ಪಾಲಿಟೆಕ್ನಿಕ್ ಕಾಲೇಜ್‍ನಿಂದ ಮಹಮದ್ ರಿಹಾನ್ ರಾಝ, ಎನ್.ಸಿ.ಸಿ ಪಿಎಸ್‍ಎಸ್‍ಇಎಂಆರ್ ತೋಳಹುಣಸೆ ಶಾಲೆಯಿಂದ ಭಾವನ.ಜಿ, ಎನ್.ಸಿ.ಸಿ ಸೆಂಟ್ ಪಾಲ್ಸ್ ಸ್ಕೂಲ್ ಚಂದನಶ್ರೀ, ಭಾರತ್ ಸೇವಾದಳ ಜಿಲ್ಲಾ ತಂಡ ಬಿಂದು ಎಂ, ಪೊಲೀಸ್ ಪಬ್ಲಿಕ್ ಶಾಲೆಯಿಂದ ಸುಜಯ್ ಹೆಚ್ ಗೌಡ, ಪಿಎಸ್‍ಎಸ್‍ಇಎಂಆರ್ ಶಾಲೆಯಿಂದ ಮಧುಸೂಧನ ಮಾಲಿ ಪಾಟೀಲ್, ರಾಷ್ಟ್ರೋತ್ಥಾನ ಸ್ಕೂಲ್ ತನ್ಮಯ್ ದೀಕ್ಷಿತ್, ಜೈನ್ ಪಬ್ಲಿಕ್ ಸ್ಕೂಲ್ ಸಾಯಿ ನೈನ, ಬಿ.ಹೆಚ್ ಪಿ.ಎಸ್ ಶಾಲೆಯಿಂದ ಅನುಶ್ರೀ, ಎಸ್‍ಎಸ್‍ಎನ್‍ಪಿಎಸ್ ಶಾಲೆಯಿಂದ ವೇದ.ಹೆಚ್.ಎನ್, ಸೇಂಟ್ ಪಾಲ್ ಸೆಂಟ್ರಲ್ ಸ್ಕೂಲ್ ನಿಂದ ಶ್ರೀಲೇಖ, ಜವಾಹರ್ ನವೋದಯ ವಿದ್ಯಾಲಯ ಶಾಲೆಯಿಂದ ಯುವರಾಜ್, ಪುಪ್ಪಾ ಮಹಾಲಿಂಗಪ್ಪ ಶಾಲೆಯಿಂದ ಧ್ರುವ ಎಸ್ ಗೌಡ, ಕೇಂದ್ರಿಯ ವಿದ್ಯಾಲಯದಿಂದ ದಿಲೀಪ್, ಸರ್ಟಿಫೈಡ್ ಸ್ಕೂಲ್‍ನಿಂದ ಅಜಯ್, ಮೌನೇಶ್ವರಿ ಕಿವುಡ ಮತ್ತು ಮೂಗರ ಶಾಲೆಯಿಂದ ತಿಪ್ಪೇಸ್ವಾಮಿ, ಸಿದ್ಧಗಂಗಾ ಹೈಯರ್ ಪ್ರೈಮರಿ ಸ್ಕೂಲ್‍ನಿಂದ ರಶ್ಮಿ, ಭಾರತ ಸ್ಕೌಟ್ಸ್ & ಗೈಡ್ಸ್ ಡಿಸ್ಟ್ರಿಕ್ ಟ್ರೂಪ್‍ನಿಂದ ಪ್ರೇರಣಾ, ಸೇಂಟ್ ಜಾನ್ಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಿಂದ ಗೀತಾಂಜಲಿ, ಡಿಎಆರ್‍ನ ಬ್ಯಾಂಡ್ ಮಾಸ್ಟರ್ ಹೊನ್ನೂರಪ್ಪ ವಾದ್ಯ ತಂಡದಿಂದ ರಾಷ್ಟ್ರಗೀತೆ ಸಹಿತ, ಶುಶ್ರಾವ್ಯ ವಾದ್ಯ ಪ್ರಸ್ತುತಪಡಿಸಿದರು.
ಈ ವೇಳೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಮೇಯರ್ ಚಮನ್‍ಸಾಬ್.ಕೆ, ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಉಪಮೇಯರ್ ಸೋಗಿ ಶಾಂತಕುಮಾರ್, ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ರವಿಕಾಂತೇಗೌಡ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ., ಎಸ್ಪಿ ಉಮಾ ಪ್ರಶಾಂತ್, ಜಿ.ಪಂ ಸಿಇಒ ಸುರೇಶ್ ಬಿ. ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಮತ್ತಿತರರಿದ್ದರು.