ರಾಜ್ಯದಲ್ಲಿ ‘ಥಗ್‌ ಲೈಫ್‌’ ಸಿನಿಮಾ ರಿಲೀಸ್‌ಗೆ ಸುಪ್ರೀಂ ಸೂಚನೆ

WhatsApp
Telegram
Facebook
Twitter
LinkedIn

ನವದೆಹಲಿ :ನಟ ಕಮಲ್ ಹಾಸನ್ ಅಭಿನಯದ ‌’ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಪ್ರದರ್ಶಿಸಲು ಅವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಕನ್ನಡ ತಮಿಳಿನಿಂದ ಹುಟ್ಟಿತು ಎಂಬ ಕಮಲ್ ಹಾಸನ್ ಅವರ ಹೇಳಿಕೆ ಇತ್ತೀಚೆಗೆ ವ್ಯಾಪಕ ವಿರೋಧಕ್ಕೆ ಕಾರಣವಾಗಿತ್ತು.‌ ಅವರ ಚಿತ್ರವನ್ನು ಬಹಿಷ್ಕರಿಸುವಂತೆ ಕರೆಗಳು ಬಂದಿದ್ದವು. ಚಿತ್ರದ ನಿರ್ಮಾಪಕರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಸಮಸ್ಯೆಯನ್ನು ಪರಿಹರಿಸಲು ನಟ ಕ್ಷಮೆಯಾಚಿಸಬೇಕೆಂಬ ಸಲಹೆ ನೀಡಿತ್ತು.

ಈ ಸಲಹೆ ವಿರುದ್ಧ ನಿರ್ಮಾಪಕರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ನ್ಯಾ. ಉಜ್ಜಲ್ ಭುಯಾನ್ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರಿದ್ದ ಪೀಠ ಹೈಕೋರ್ಟ್ ಸಲಹೆಯನ್ನು ಪ್ರಶ್ನಿಸಿತು. ಸಂಘಟನೆಗಳ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರವನ್ನು ಟೀಕಿಸಿತು.

ಕಾನೂನಿನ ನಿಯಮವು ಮೇಲುಗೈ ಸಾಧಿಸಬೇಕು ಎಂದ ಸುಪ್ರೀಂ ಕೋರ್ಟ್ ನಾವು ಇಂತಹ ಬೆಳವಣಿಗೆ ಅನುಮತಿಸಲು ಸಾಧ್ಯವಿಲ್ಲ. ಕಾನೂನಿನ ನಿಯಮವು ಯಾವುದೇ ವ್ಯಕ್ತಿಗೆ ಚಲನಚಿತ್ರ ಬಿಡುಗಡೆ ಮಾಡಲು ಅವಕಾಶ ನೀಡಬೇಕೆಂದು ಹೇಳುತ್ತದೆ. ಚಿತ್ರಮಂದಿರಗಳು ಸುಟ್ಟುಹೋಗುತ್ತವೆ ಎಂಬ ಭಯದಿಂದ ಅದನ್ನು ತಡೆಯಲು ಸಾಧ್ಯವಿಲ್ಲ. ಜನರು ಬಂದು ಚಿತ್ರವನ್ನು ನೋಡಬೇಕು ಎಂದು ನಾವು ಹೇಳುತ್ತಿಲ್ಲ. ಆದರೆ ಚಿತ್ರವನ್ನು ಬಿಡುಗಡೆ ಮಾಡಬೇಕು ಎಂದು ಪೀಠ ಹೇಳಿತು.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon