ಬೆಂಗಳೂರು: ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ ಸಂಬಂಧ ಹೊರಡಿಸಿದ ಅಧಿಸೂಚನೆ ಹಿಂಪಡೆಯಲು ಕೃಷಿ ಇಲಾಖೆ ಕೋರಿದ ಕಾರಣ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಥಗಿತಗೊಳಿಸಿದೆ.
ಪರಿಶಿಷ್ಟ ಜಾತಿಗೆ ಶೇಕಡ 15ರಷ್ಟು ಮೀಸಲಾತಿ ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದರಲ್ಲಿ ಒಳ ಮೀಸಲಾತಿ ಪ್ರಮಾಣ ಹಂಚಿಕೆ ಮಾಡಲಾಗಿದೆ. ಅದನ್ನು ಅಳವಡಿಸಿಕೊಂಡು ಪರಿಷ್ಕೃತ ಅಧಿಸೂಚನೆ ಹೊರಡಿಸಬೇಕಿರುವ ಕಾರಣ ಚಾಲ್ತಿಯಲ್ಲಿರುವ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಕೃಷಿ ಆಯುಕ್ತರು ಕೋರಿದ್ದಾರೆ.
ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ ಸಂಬಂಧ ಹೊರಡಿಸಿರುವ ಅಧಿಸೂಚನೆಯನ್ನು ಹಿಂಪಡೆಯಲು ಕೃಷಿ ಇಲಾಖೆ ಕೋರಿರುವ ಕಾರಣ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ಜು ಸ್ಥಗಿತಗೊಳಿಸಲಾಗಿದೆ.
ಪರಿಶಿಷ್ಟ ಜಾತಿಗೆ ಶೇ 15 ರಷ್ಟು ಮೀಸಲಾತಿ ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ. ಪರಿಷ್ಕೃತ ಒಳಮೀಸಲಾತಿ ಪ್ರಮಾಣವನ್ನು ಅಳವಡಿಸಿಕೊಂಡು ಹೊಸ ಅಧಿಸೂಚನೆ ಹೊರಡಿಸಬೇಕಿರುವ ಕಾರಣ ಚಾಲ್ತಿಯಲ್ಲಿರುವ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲು ಕೃಷಿ ಆಯುಕ್ತರು ಕೋರಿದ್ದಾರೆ. ಮುಂದಿನ ಪ್ರಕ್ರಿಯೆಯನ್ನು ನಂತರ ತಿಳಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

































