ಬೆಂಗಳೂರು : ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಮಠದ ಪೀಠಾಧ್ಯಕ್ಷ ಚಂದ್ರಶೇಖರ್ ಸ್ವಾಮೀಜಿ ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ಹೇಳಿಕೆ ನೀಡಿದ್ದ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಚಾಮರಾಜಪೇಟೆಯ ವಾಲ್ಮೀಕಿ ನಗರದ ನಿವಾಸಿ ಸೈಯದ್ ಅಬ್ಬಾಸ್ ಅವರು ನೀಡಿದ ದೂರಿನ ಮೇರೆಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತ ಕಲಂ 299 (ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿ ದೂರು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಕಿಸಾನ್ ಸಂಘ ನವೆಂಬರ್ 26 ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿಶ್ವ ಒಕ್ಕಳಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರ ಸ್ವಾಮೀಜಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡುವಾಗ ಮುಸ್ಲಿಮರಿಗೆ ಮತದಾನ ಹಕ್ಕು ಇಲ್ಲದಂತೆ ಮಾಡಬೇಕು. ದೇಶದಲ್ಲಿ ವಕ್ಫ ಮಂಡಳಿಯೇ ಇಲ್ಲದಂತೆ ಮಾಡಿದ್ರೆ ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ ಎಂದು ಸ್ವಾಮೀಜಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.