ನ್ಯೂಯಾರ್ಕ್ : ಟಿ20 ವರ್ಲ್ಡ್ ಕಪ್ ಶುರುವಾಗಿದೆ. ಟೀಮ್ ಇಂಡಿಯಾ ಆಟಗಾರರು ಟಿ20 ವಿಶ್ವಕಪ್ ಹೋರಾಟಕ್ಕೆ ಅಣಿಯಾಗಬೇಕಿದೆ. ಇಂದು ನ್ಯೂಯಾರ್ಕ್ ನಲ್ಲಿ ನಡೆಯುವ “ಎ’ ವಿಭಾಗದ ತನ್ನ ಮೊದಲ ಮುಖಾಮುಖಿಯಲ್ಲಿ ಭಾರತ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ತವರಲ್ಲೇ ನಡೆದ ಕಳೆದ ಏಕದಿನ ವಿಶ್ವಕಪ್ ವೇಳೆ ನೆಚ್ಚಿನ ತಂಡವಾಗಿದ್ದ ಭಾರತ, ಅಜೇಯವಾಗಿ ಫೈನಲ್ ತನಕ ಅಭಿಯಾನ ನಡೆಸಿತ್ತು.
ಟಿ20 ವಿಶ್ವಕಪ್‌ನಲ್ಲೂ ಭಾರತ ಬಲಿಷ್ಠ ತಂಡವನ್ನೇ ಕಣಕ್ಕಿಳಿಸಿದೆ. 2007ರ ಚೊಚ್ಚಲ ಪಂದ್ಯಾವಳಿಯಲ್ಲಿ ಧೋನಿ ಸಾರಥ್ಯದಲ್ಲಿ ಚಾಂಪಿಯನ್ ಆದ ಬಳಿಕ ಮತ್ತೆ ಭಾರತ ಟ್ರೋಫಿ ಎತ್ತಿಲ್ಲ. 2014ರ ಢಾಕಾ ಕೂಟದಲ್ಲಿ ಫೈನಲ್ ಪ್ರವೇಶಿಸಿತಾದರೂ ಅಲ್ಲಿ ಶ್ರೀಲಂಕಾಕ್ಕೆ ಶರಣಾಯಿತು. ಆಗಲೂ ಧೋನಿಯೇ ನಾಯಕರಾಗಿದ್ದರು. ಈಗಿನ ಲೆಕ್ಕಾಚಾರದಂತೆ ಭಾರತ ಸೂಪರ್-8 ಪ್ರವೇಶಿಸಿ, ಅನಂತರ ಸೆಮಿಫೈನಲ್ ತಲುಬಹುದು.
ಅನಂತರದ ಹಾದಿ ತುಸು ಕಠಿಣ ಅಂತಾ ಹೇಳಲಾಗ್ತಿದೆ. T20 ವಿಶ್ವಕಪ್ 2024 ರ ಭಾರತ vs ಐರ್ಲೆಂಡ್ ಪಂದ್ಯ ಇಂದು ರಾತ್ರಿ 8:00 ಕ್ಕೆ ಪ್ರಾರಂಭವಾಗುತ್ತದೆ. ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ 2024 ರ T20 ವಿಶ್ವಕಪ್‌ನ ಭಾರತ ಮತ್ತು ಐರ್ಲೆಂಡ್ ಪಂದ್ಯ ನಡೆಯಲಿದೆ. ಭಾರತ : ರೋಹಿತ್ ಶರ್ಮಾ (ಸಿ), ಹಾರ್ದಿಕ್ ಪಾಂಡ್ಯ (ವಿಸಿ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ , ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ , ಸಂಜು ಸ್ಯಾಮ್ಸನ್, ಶಿವಂ ದುಬೆ , ರವೀಂದ್ರ ಜಡೇಜಾ , ಅಕ್ಸರ್ ಪಟೇಲ್ , ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್ , ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ . ಐರ್ಲೆಂಡ್: ಪಾಲ್ ಸ್ಟಿರ್ಲಿಂಗ್ (ಸಿ), ಮಾರ್ಕ್ ಅಡೇರ್, ರಾಸ್ ಅಡೇರ್, ಆಂಡ್ರ್ಯೂ ಬಾಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಗ್ರಹಾಂ ಹ್ಯೂಮ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ನೀಲ್ ರಾಕ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಬೆನ್ ವೈಟ್, ಕ್ರೇಗ್ ಯಂಗ್.