ಚಿತ್ರದುರ್ಗ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ 2025-26ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಹಾಗೂ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ನೀಡಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಈಶ್ವರ್ ಬಿ ಖಂಡ್ರೆ ಅವರ ಅನುಮತಿ ಮೇರೆಗೆ ಚಿತ್ರದುರ್ಗ ಜಿಲ್ಲೆಯ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಮಹಾಸಭಾದ ವೆಬ್ಸೈಟ್ www.aivlm.org ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅಂಚೆ, ಕೊರಿಯರ್ ಅಥವಾ ಖುದ್ದಾಗಿ ನೀಡುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ, ಕೇವಲ ಆನ್ಲೈನ್ ಅರ್ಜಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಜಿಲ್ಲೆಯ ಗ್ರಾಮೀಣ ಭಾಗದ ಮತ್ತು ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳುವಂತೆ ಎಂದು ಚಿತ್ರದುರ್ಗ ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ಶಶಿಧರ ಬಾಬು ತಿಳಿಸಿದ್ದಾರೆ.






























