ಪಶ್ಚಿಮ ಬಂಗಾಳ : ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪವು ಯಾವುದೇ ವಯಸ್ಸಿನಲ್ಲಿ ಗಮನಾರ್ಹ ಸಾಧನೆಗಳಿಗೆ ಕಾರಣವಾಗಬಹುದು. ಇದಕ್ಕೆ ಪಶ್ಚಿಮ ಬಂಗಾಳದ ಭಾರತೀಯ ಅರಣ್ಯ ಸೇವೆ ಅಧಿಕಾರಿಯಾದ ತಮಾಲಿ ಸಹಾ ಅವರ ಸ್ಪೂರ್ತಿದಾಯಕ ಉದಾಹರಣೆಯಾಗಿದೆ.
ಪಶ್ಚಿಮ ಬಂಗಾಳದ ಉತ್ತರ 24 ಪರಗಣಗಳಿಗೆ ಸೇರಿದ ತಮಾಲಿ, ತಮ್ಮ ಸ್ವಂತ ಊರಿನಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ, ಕೋಲ್ಕತ್ತಾಗೆ ತೆರಳಿ ಕೋಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಪ್ರಾಣಿಶಾಸ್ತ್ರದಲ್ಲಿ ಪದವಿ ಪಡೆದರು.
ಕಾಲೇಜಿನಲ್ಲಿರುವಾಗ, ತಮಾಲಿ ಅವರು ಯುಪಿಎಸ್‌ಸಿ ಪರೀಕ್ಷೆಗಳಿಗೆ ತಯಾರಿ ನಡೆಸುವಲ್ಲಿ ನಿರತರಾಗಿದ್ದರು. 2020 ರಲ್ಲಿ, ಅವರ ಪ್ರಯತ್ನಕ್ಕೆ ಫಲ ದೊರೆಯಿತು.ಅವರು ಯುಪಿಎಸ್‌ಸಿ ಭಾರತೀಯ ಅರಣ್ಯ ಸೇವಾ ಪರೀಕ್ಷೆಯಲ್ಲಿ 94 ರ ಆಲ್ ಇಂಡಿಯಾ ರಾಂಕ್ ಗಳಿಸಿದರು. ಈ ಮೂಲಕ ಐಎಫ್‌ಎಸ್ ಅಧಿಕಾರಿಯಾಗುವಲ್ಲಿ ಯಶಸ್ವಿಯಾದ ಅವರು, ಪಶ್ಚಿಮ ಬಂಗಾಳದಲ್ಲೇ ಸೇವೆ ಸಲ್ಲಿಸಲು ಅವಕಾಶ ಪಡೆಯುತ್ತಾರೆ.
ತಮಾಲಿ ಅವರು ಮೊದಲ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗುವ ಮೂಲಕ ಕೇವಲ 23 ವರ್ಷದಲ್ಲಿ ಐಎಫ್‌ಎಸ್ ಅಧಿಕಾರಿಯಾಗುವಲ್ಲಿ ಯಶಸ್ವಿಯಾಗುತ್ತಾರೆ. ಈ ಮೂಲಕ ಅನೇಕರಿಗೆ ಮಾದರಿಯಾಗಿದ್ದಾರೆ.