ಯುಪಿಐ ಮೂಲಕ 40 ಲಕ್ಷ ರೂಪಾಯಿಗಿಂತ ಅಧಿಕ ವಹಿವಾಟು ನಡೆಸಿದ ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿಗಳು ಕಮರ್ಷಿಯಲ್ ಟ್ಯಾಕ್ಸ್ ಪಾವತಿ ಮಾಡಬೇಕೆಂಬ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್‌ಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಬೆನ್ನಲ್ಲೇ ವಾಣಿಜ್ಯ ತೆರಿಗೆ ಇಲಾಖೆ ಹೂವಿನ ವ್ಯಾಪಾರಿಗೂ ಶಾಕ್ ನೀಡಿದೆ. ತಳ್ಳುವ ಗಾಡಿಯಲ್ಲಿ ಹೂವು ವ್ಯಾಪಾರ ಮಾಡುವ ಉಳ್ಳಾಲದ ಹೂವಿನ ವ್ಯಾಪಾರಿ ಸೋಮೆಗೌಡ ಎಂಬುವರಿಗೆ 52 ಲಕ್ಷ ರೂ. ತೆರಿಗೆ ಪಾವತಿಸುವಂತೆ ವಾಣಿಜ್ಯ ತೆರಿಗೆ ಇಲಾಖೆ ಶೋಕಾಸ್ ನೋಟಿಸ್ ನೀಡಿದೆ.
ಈ ಬಗ್ಗೆ ಹೂವಿನ ವ್ಯಾಪಾರಿ ಸೋಮೆಗೌಡ ಮಾತನಾಡಿ, 10 ವರ್ಷದಿಂದ ಹೂವಿನ ವ್ಯಾಪಾರ ಮಾಡುತ್ತಿದ್ದೇನೆ. ಒಂದು ತಿಂಗಳ ಹಿಂದೆ ಒಂದು ನೋಟಿಸ್ ಕೊಟ್ಟರು. ಈಗ ಮತ್ತೆ ವಾಟ್ಸಪ್ ಮೂಲಕ ಎರಡನೇ ನೋಟಿಸ್ ಬಂದಿದೆ. ಎಲ್ಲಿಂದ ಹಣ ಕಟ್ಟುವುದು, ಹೀಗೆ, ಆದ್ರೆ ನಾವು ಪ್ರಾಣ ಬಿಡಬೇಕಾಗುತ್ತೆ. ಮುಂದೆ ಏನು ಮಾಡಬೇಕು ಎಂಬುವುದು ಗೊತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. 40 ಲಕ್ಷಕ್ಕಿಂತ ಹೆಚ್ಚು ವಹಿವಾಟು ನಡೆಸಿದ ವ್ಯಾಪಾರಿಗಳು ತೆರಿಗೆ ಪಾವತಿಸುವಂತೆ ವಾಣಿಜ್ಯ ತೆರಿಗೆ ಇಲಾಖೆಯು ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಅನೇಕ ವರ್ತಕರು ‘ನೋ ಗೂಗಲ್, ಫೋನ್ ಪೇ, ಓನ್ಸಿ ಕ್ಯಾಶ್’ ಎಂಬ ಬೋರ್ಡ್‌ಗಳನ್ನು ಹಾಕಿದ್ದಾರೆ. ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಚಿಲ್ಲರೆ ವ್ಯಾಪಾರಿಗಳು ನಗದು ವ್ಯಾಪಾರಕ್ಕೆ ಮರಳುವ ಮನಸ್ಸು ಮಾಡುತ್ತಿದ್ದು, ತಮ್ಮ ಅಂಗಡಿಗಳಿಗೆ ಅಂಟಿಸಿದ್ದ ಯುಪಿಐ ಕ್ಯೂ ಆರ್‌ಕೋಡ್ ಸ್ಟಿಕ್ಕರ್ ತೆಗೆಯುತ್ತಿದ್ದಾರೆ.