ದೆಹಲಿ: ವಿಶ್ವವಿದ್ಯಾಲಯಗಳಿಗೆ ಯುಜಿಸಿ ಪ್ರಮುಖ ನಿರ್ದೇಶನಗಳನ್ನು ನೀಡಿದೆ. ವಿದ್ಯಾರ್ಥಿಗಳಿಗೆ ಸ್ಥಳೀಯ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಸೂಚಿಸಿದೆ.
‘ವಿದ್ಯಾರ್ಥಿಗಳು ಇಂಗ್ಲಿಷ್ ಮಾಧ್ಯಮದಲ್ಲಿ ಓದಿದರೂ ಸ್ಥಳೀಯ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು’ ಎಂದು ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ ಹೇಳಿದ್ದಾರೆ.
ಉನ್ನತ ಶಿಕ್ಷಣ ಸಂಸ್ಥೆಗಳು ಪಠ್ಯ ಪುಸ್ತಕಗಳನ್ನು ರಚಿಸುವುದರೊಂದಿಗೆ ಮಾತೃಭಾಷೆಯಲ್ಲಿ ಬೋಧನೆ ಮಾಡುವಂತೆ ಕ್ರಮಕೈಗೊಳ್ಳಬೇಕು ಎಂದು ಯುಜಿಸಿ ಹೇಳಿದೆ.