ಮುಂಬೈ: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿಗೆ ಇಮೇಲ್ ಮೂಲಕ ಜೀವ ಬೆದರಿಕೆ ಕರೆ ಬಂದಿದೆ ವರದಿಯಾಗಿದೆ.
ಇಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಮೊಹಮ್ಮದ್ ಶಮಿ ಅವರ ಸಹೋದರ ಹಸೀಬ್ ಘಟನೆಯ ಬಗ್ಗೆ ಅದ್ರೋಹಾ ಪೊಲೀಸರಿಗೆ ದೂರು ನೀಡಿದ್ದಾರೆ. ಅಮೋಹಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಆನಂದ್ ಅವರ ಆದೇಶದ ಮೇರೆಗೆ, ಅಮೋಹಾ ಸೈಬರ್ ಸೆಲ್‌ನಲ್ಲಿ ಎಫ್‌ಐಆರ್ (FIR) ಕೂಡ ದಾಖಲಿಸಲಾಗಿದೆ. ಮೊಹಮ್ಮದ್ ಶಮಿ ಪ್ರಸ್ತುತ ಐಪಿಎಲ್‌ನಲ್ಲಿ (IPL 2025) ಆಡುತ್ತಿದ್ದು, ಅವರು ಸನ್‌ರೈಸರ್ಸ್ ಹೈದರಾಬಾದ್ ತಂಡದ ಭಾಗವಾಗಿದ್ದಾರೆ. ಇದನ್ನೂ ಓದಿ: ಗೌತಮ್ ಗಂಭೀರ್‌ಗೆ ಕೊ*ಲೆ ಬೆದರಿಕೆ ಹಾಕಿದ್ದು ಯಾರು ಗೊತ್ತಾ..!? ಶಮಿಗೆ ರಜಪೂತ್ ಸಿಂಧರ್ ಎಂಬ ವ್ಯಕ್ತಿಯಿಂದ 1 ಕೋಟಿ ರೂ. ಬೇಡಿಕೆಯ ಇಮೇಲ್ ವಿಳಾಸದ ಮೂಲಕ ಕೊಲೆ ಬೆದರಿಕೆ ಬಂದಿದೆ. ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ಇದೇ ರೀತಿಯ ಬೆದರಿಕೆ ಬಂದ ಕೆಲವು ದಿನಗಳ ನಂತರ, ಅವರು ತಕ್ಷಣ ದೆಹಲಿ ಪೊಲೀಸರಿಗೆ ದೂರು ನೀಡಿದ್ದರು.