ಅಡಿಲೇಡ್ : ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಎರಡನೇ ಟೆಸ್ಟ್ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. ಈ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ.
ಎರಡನೇ ಟೆಸ್ಟ್ ಡೇ ಆಂಡ್ ನೈಟ್ ನಡೆಯಲಿದ್ದು, ಪಿಂಕ್ ಬಾಲ್ ಟೆಸ್ಟ್‌ಗೆ ಟೀಮ್ ಇಂಡಿಯಾ ಭರ್ಜರಿ ತಯಾರಿ ನಡೆಸಿದೆ. ಈಗಾಗಲೇ ಮೊದಲ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಎರಡನೇ ಟೆಸ್ಟ್ ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸುವ ಕನಸು ಹೊಂದಿದೆ. ಅಡಿಲೇಡ್ ನಲ್ಲಿ ಎರಡನೇ ಟೆಸ್ಟ್ ನಡೆಯಲಿದೆ. ಈ ಟೆಸ್ಟ್ ಹಗಲು ರಾತ್ರಿಯದ್ದಾಗಿರಲಿದೆ.
ಹೀಗಾಗಿ ಟೀಮ್ ಇಂಡಿಯಾ ಡೇ-ಆಂಡ್ ನೈಟ್ ಟೆಸ್ಟ್‌ನಲ್ಲಿ ಭಾರತ ಈ ವರೆಗೆ ನಾಲ್ಕು ಹಗಲು ರಾತ್ರಿ ಟೆಸ್ಟ್ ಪಂದ್ಯವನ್ನು ಆಡಿದ್ದು, ಮೂರರಲ್ಲಿ ಜಯ ಸಾಧಿಸಿದೆ. ಈ ಅಂಕಿ ಅಂಶಗಳನ್ನು ನೋಡಿದರೆ ಹಗಲು ರಾತ್ರಿ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾದ ಗೆಲುವಿನ ಶೇಕಡಾ ವಾರು 75 ರಷ್ಟಿದೆ. ಅಡಿಲೇಡ್ ನಲ್ಲಿ ನಡೆದ ಹಗಲು ರಾತ್ರಿ ಟೆಸ್ಟ್ ಪಂದ್ಯವನ್ನು ನಾಲ್ಕು ವರ್ಷಗಳ ಹಿಂದೆ ಸೋಲು ಕಂಡಿತ್ತು. ಬಳಿಕ ಆಡಿದ ಮೂರು ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿದೆ.