ಮುಂಬೈ : ಟೀಂ ಇಂಡಿಯಾದ ಸ್ಪಿನ್ನರ್ ಯಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ ನಡುವಿನ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು ಶೀಘ್ರವೇ ಡಿವೋರ್ಸ್ ಅಗಲಿದ್ದಾರೆ ಎಂದು ವರದಿಯಾಗಿದೆ.
ಇಬ್ಬರು ಪ್ರತ್ಯೇಕವಾಗಿದ್ದು, ವಿಚ್ಛೇದನ ಪ್ರಕ್ರಿಯೆಗಳು ಇನ್ನೂ ಅಂತಿಮಗೊಂಡಿಲ್ಲ. ಎಲ್ಲಾ ಷರತ್ತುಗಳು ಪೂರ್ಣಗೊಂಡ ಬಳಿಕ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಆದರೆ ದಾಂಪತ್ಯ ಬಿರುಕಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ದಂಪತಿ ಪ್ರತ್ಯೇಕವಾಗಿ ತಮ್ಮ ಜೀವನವನ್ನು ಮುಂದುವರಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಈ ವದಂತಿಗೆ ಪೂರಕ ಎಂಬಂತೆ ಇಬ್ಬರೂ ಇನ್‌ಸ್ಟಾದಲ್ಲಿ ಅನ್‌ಫಾಲೋ ಮಾಡಿದ್ದಾರೆ. ಚಹಲ್ ಅವರು ಧನಶ್ರೀ ಜೊತೆಗಿನ ಫೋಟೋ ಡಿಲೀಟ್ ಮಾಡಿದ್ದರೆ ಧನಶ್ರೀ ಚಹಲ್ ಅವರೊಂದಿಗೆ ಫೋಟೋ ಡಿಲೀಟ್ ಮಾಡಿಲ್ಲ.
ಭಾರತದ ಖ್ಯಾತ ಜೋಡಿಗಳಲ್ಲಿ ಒಬ್ಬರಾಗಿದ್ದ ಚಹಲ್ ಮತ್ತು ಧನಶ್ರೀ 2020ರ ಡಿಸೆಂಬರ್‌ನಲ್ಲಿ ಮದುವೆಯಾಗಿದ್ದರು.