ಮುಂಬೈ : ದೆಹಲಿಯಿಂದ ಗೋವಾಗೆ ತೆರಳುತ್ತಿದ್ದ ಇಂಡಿಗೋ ವಿಮಾನವೊಂದರಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಹಿನ್ನೆಲೆ ಮುಂಬೈನಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಯಿತು.
ವಿಮಾನದ ಎಂಜಿನ್‌ನಲ್ಲಿ ಸಮಸ್ಯೆ ಕಂಡುಬಂದಿದ್ದು, ಪೈಲಟ್ ತುರ್ತು ಸ್ಥಿತಿಯನ್ನು ಸೂಚಿಸಲು `ಪ್ಯಾನ್-ಪ್ಯಾನ್-ಪ್ಯಾನ್’ ಘೋಷಣೆ ಮಾಡಿದ್ದಾರೆ ಎಂದು ವಿಮಾನಯಾನ ಮೂಲಗಳು ತಿಳಿಸಿವೆ.
ಇಂಡಿಗೋ ವಿಮಾನ 6E6271 ದೆಹಲಿಯಿಂದ ಗೋವಾಗೆ ತೆರಳುತ್ತಿರುವಾಗ ಎಂಜಿನ್‌ನಲ್ಲಿ ಸಮಸ್ಯೆ ಉಂಟಾಗಿದೆ. ಪರಿಣಾಮ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು. ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಇಂಡಿಗೋ ಏರ್‌ಲೈನ್ಸ್ ದೃಢಪಡಿಸಿದೆ.