ಪಾಟ್ನಾ : ಈ ಬಾರಿ ಬಿಹಾರದಲ್ಲಿ ನಿರಾಯಾಸವಾಗಿ ಗೆದ್ದು ನಾವು ಸರ್ಕಾರ ರಚಿಸುತ್ತೇವೆ ಎಂದು ಮಹಾಘಟಬಂಧನ್ ಪಕ್ಷದ ಮೈತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಹಾರ ಚುನಾವಣಾ ಫಲಿತಾಂಶಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಹಾಘಟಬಂಧನ್ ಸ್ಪಷ್ಟ ಬಹುಮತ ಗಳಿಸಲಿದೆ. ರಾಜ್ಯದಲ್ಲಿ ನಾವು ಸರ್ಕಾರ ರಚಿಸುತ್ತೇವೆ, ಉದ್ಯೋಗ ರಾಜ್ಯ ಬರುತ್ತೆ ಎಂದು ಸಮೀಕ್ಷೆಗಳನ್ನು ತಳ್ಳಿಹಾಕಿದರು.
“ನಾವು ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುತ್ತೇವೆ ಅನ್ನೋ ಸಂಪೂರ್ಣ ವಿಶ್ವಾಸ ಇದೆ. ನಿರಾಯಾಸವಾಗಿ ಗೆಲ್ಲುತ್ತೇವೆ. ನಮ್ಮ ಕಾರ್ಯಕರ್ತರು ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಎಚ್ಚರಿಕೆ ವಹಿಸಿದ್ದಾರೆ ಎಂದು ತಿಳಿಸಿದರಲ್ಲದೇ, ಚುನಾವಣಾ ಆಯೋಗ ಮತ ಎಣಿಕೆಯಲ್ಲಿ ನಿಷ್ಪಕ್ಷಪಾತತೆ ಖಚಿತಪಡಿಸಿಕೊಳ್ಳಬೇಕು” ಎಂದು ಹೇಳಿದರು.
“ಅಲ್ಲದೇ ಸರ್ಕಾರ 2020ರಲ್ಲಿ ಮಾಡಿದ ತಪ್ಪನ್ನ ಮತ್ತೆ ಮಾಡಿದ್ರೆ ಅಥವಾ ಸಂವಿಧಾನ ಬಾಹಿರ ಚಟುವಟಿಕೆ ಮಾಡಿದ್ರೆ, ಅಧಿಕಾರ ಮೀರಿ ವರ್ತಿಸಿದ್ರೆ ಜನರೇ ತಕ್ಕ ಉತ್ತರ ಕೊಡ್ತಾರೆ” ಎಂದು ಎಚ್ಚರಿಕೆ ನೀಡಿದರು.































