ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಹಲವು ಟೆಂಟ್ ಗಳು, ವಾಹನಗಳು ಸುಟ್ಟು ಭಸ್ಮವಾಗಿವೆ.
ಕುಂಭಮೇಳದಲ್ಲಿ ಒಟ್ಟು 25 ಸೆಕ್ಟರ್ ಗಳಲ್ಲಿ ಟೆಂಟ್ ಗಳನ್ನು ನಿರ್ಮಿಸಲಾಗಿತ್ತು. ಅವುಗಳಲ್ಲಿ 19ನೇ ಸೆಕ್ಟರ್ ಪ್ರದೇಶದಲ್ಲಿನ ಟೆಂಟ್ ಒಂದರಲ್ಲಿ ಸಿಲಿಂದರ್ ಸ್ಫೋತಗೊಂಡು ಬೆಂಕಿ ಅವಘಡ ಸಂಭವಿಸಿದೆ. ರೈಲ್ವೆ ಬ್ರಿಡ್ಜ್ ಕೆಳಭಾಗದಲ್ಲಿಯೇ ಈ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ 20-25 ಟೆಂಟ್ ಗಳು ಬೆಂಕಿಗಾಹುತಿಯಾಗಿವೆ. ಒಂದು ಸಿಲಿಂಡರ್ ಸ್ಫೋಟದ ಬೆಂಕಿ 12 ಸಿಂಡರ್ ಸ್ಫೋಟಕ್ಕೆ ಕಾರಣವಗಿವೆ. ಬೆಂಕಿಯ ವೇಳೆ ಗಾಳಿಯು ಜೋರಾಗಿ ಬೀಸುತ್ತಿರುವುದರಿಂದ ಬೆಂಕಿ ಕೆನ್ನಾಲಿಗೆ ವೇಗವಾಗಿ ವ್ಯಾಪಿಸುತ್ತಿದೆ.
ಘಟನಾ ಸ್ಥಳಕ್ಕೆ 6 ಅಗ್ನಿಶಾಮಕ ವಾಹನ ಆಗಮಿಸಿದ್ದು, ಸಿಬ್ಬಂದಿಗಳು ಬೆಂಕಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
 
				 
         
         
         
															 
                     
                     
                     
                    



































 
    
    
        