ಟೆಕ್ಸ್ ಟೈಲ್ಸ್ ಉದ್ಯಮಿಯೊಬ್ಬ ಮಗ ಖೋಟಾ ನೋಟು ಪ್ರಿಂಟ್:  ಆರೋಪಿ ಅಂದರ್.!

WhatsApp
Telegram
Facebook
Twitter
LinkedIn

 

ಬೆಂಗಳೂರು: ಹೋಟೆಲ್ ರೂಮ್‌ನಲ್ಲಿ ಖೋಟಾ ನೋಟುಗಳನ್ನು ಪ್ರಿಂಟ್ ಮಾಡಿದ್ದ ಆರೋಪಿಯನ್ನು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕ್ರಿಷ್ ಮಾಲಿ (23) ಬಂಧಿತ ಆರೋಪಿ. ಟಸ್ಕರ್ ಟೌನ್‌ನಲ್ಲಿರುವ ಹೋಟೆಲ್‌ನಲ್ಲಿ ಜೂನ್ 1ರಂದು ರೂಮ್ ಬುಕ್ ಮಾಡಿದ್ದ ಆರೋಪಿ, ಖೋಟಾ ನೋಟುಗಳನ್ನು ಪ್ರಿಂಟ್ ಮಾಡಿದ್ದ. ಅಲ್ಲದೇ ಜೂನ್ 7ರಂದು ಹೋಟೆಲ್‌ನಿಂದ ಚೆಕ್ ಔಟ್ ಆಗುವಾಗ ನಕಲಿ ನೋಟುಗಳ ಮೂಲಕ ಬಿಲ್​ ಪಾವತಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಟೆಕ್ಸ್ ಟೈಲ್ಸ್ ಉದ್ಯಮಿಯೊಬ್ಬರ ಮಗನಾಗಿರುವ ಕ್ರಿಷ್ ಮಾಲಿ, ಮನೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಜಗಳ ಮಾಡಿಕೊಂಡು ಆನ್‌ಲೈನ್‌ ಮೂಲಕ ಹೋಟೆಲ್‌ನಲ್ಲಿ ರೂಮ್ ಬುಕ್ ಮಾಡಿದ್ದ. ತನ್ನ ಬಳಿಯಿರುವ ಹಣ ಎಷ್ಟು ದಿನಗಳ ಕಾಲ ಸಾಲಬಹುದು ಎಂದು ಯೋಚಿಸಿದ್ದ ಆರೋಪಿ, ಅದಕ್ಕಾಗಿ ತಾನೇ ಖೋಟಾ ನೋಟುಗಳನ್ನು ಪ್ರಿಂಟ್ ಮಾಡಲು ಯೋಚಿಸಿದ್ದ.

ಬ್ಯಾಗ್‌ನಲ್ಲಿ ಪ್ರಿಂಟರ್, ಸ್ಕ್ಯಾನರ್‌ಗಳನ್ನು ತಂದಿದ್ದ ಆರೋಪಿ ಹೋಟೆಲ್‌ನಲ್ಲಿ ಕುಳಿತೇ 500 ರೂ. ಮುಖಬೆಲೆಯ ನಕಲಿ ನೋಟುಗಳನ್ನು ಕಲರ್ ಜೆರಾಕ್ಸ್ ಮಾಡಿದ್ದ. ಬಳಿಕ ಜೂನ್ 7ರಂದು ಮಧ್ಯಾಹ್ನ ಹೋಟೆಲ್‌ನಿಂದ ಚೆಕ್ ಔಟ್ ಆಗುವಾಗ ನಕಲಿ ನೋಟುಗಳ ಮೂಲಕವೇ 3 ಸಾವಿರ ರೂ. ಬಿಲ್ ಪಾವತಿಸಿ ತೆರಳಿದ್ದ. ಅದೇ ದಿನ ಬೆಳಗ್ಗೆ ಹೋಟೆಲ್‌ನಿಂದ ಸಂಗ್ರಹಿಸಲಾದ ತ್ಯಾಜ್ಯದಲ್ಲಿ ಕೆಲ ನಕಲಿ ನೋಟುಗಳು ಪತ್ತೆಯಾಗಿರುವುದನ್ನು ಪೌರಕಾರ್ಮಿಕ ಸಿಬ್ಬಂದಿ ಹೋಟೆಲ್ ಮ್ಯಾನೇಜರ್ ಬಳಿ ಹೇಳಿದ್ದರು.

ಆರೋಪಿಯ ಚೆಕ್ ಔಟ್ ಆದ ಕೆಲ ಸಮಯದ ಬಳಿಕ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ ಆತ ನೀಡಿದ್ದ ನೋಟುಗಳನ್ನು ಪರಿಶೀಲಿಸಿದಾಗ ಅವು ನಕಲಿ ಎಂದು ತಿಳಿದು ಬಂದಿತ್ತು. ಬಳಿಕ ಆತ ತಂಗಿದ್ದ ರೂಮ್‌ನಲ್ಲಿ ಪರಿಶೀಲಿಸಿದಾಗ ಬಿಳಿ ಹಾಳೆಗಳ ಬಂಡಲ್, ನಕಲಿ ನೋಟ್​ನ ಚೂರುಗಳು ಪತ್ತೆಯಾಗಿದ್ದವು. ನಂತರ ಹೋಟೆಲ್ ಮ್ಯಾನೇಜರ್ ಮೊಹಮ್ಮದ್ ಷರೀಫ್ ಉದ್ದೀನ್ ಅವರು ಕಮರ್ಷಿಯಲ್ ಸ್ಟ್ರೀಟ್ ಠಾಣೆಗೆ ದೂರು ನೀಡಿದ್ದರು.

 

ರೂಮ್ ಬಾಡಿಗೆಗೆ ಪಡೆದುಕೊಳ್ಳುವಾಗ ಆರೋಪಿ ನೀಡಿದ್ದ ಆಧಾರ್‌ನಲ್ಲಿದ್ದ ವಿಳಾಸ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಈ ರೀತಿಯ ನಕಲಿ ನೋಟುಗಳನ್ನು ಆರೋಪಿ ಬೇರೆ ಎಲ್ಲಿಯಾದರೂ ನೀಡಿದ್ದನಾ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon