ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು, ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 18, 19 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅರಬ್ಬೀ ಸಮುದ್ರದ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅ.18 ರಿಂದ ಅ.23 ರವರೆಗೆ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಅಕ್ಟೋಬರ್ 24 ರವರೆಗೂ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಸನ , ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯ ಮುನ್ಸೂಚನೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಂಗಳೂರು, ಹಾಸನ, ಕೊಡಗು, ಮಂಡ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಲ್ಲಿ ಅಕ್ಟೋಬರ್ 23 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

































