ಬ್ಯಾಂಕ್ ನಲ್ಲಿ ಉದ್ಯೋಗ ಮಾಡಲು ಆಸಕ್ತಿ ಇರುವವರಿಗೆ ಬ್ಯಾಂಕ್ ಆಫ್ ಬರೋಡಾ ಒಂದು ಸುವರ್ಣ ಅವಕಾಶವನ್ನು ನೀಡುತ್ತಿದೆ. ಬ್ಯಾಂಕ್ ಆಫ್ ಬರೋಡಾ ವಿವಿಧ ಇಲಾಖೆಗಳಲ್ಲಿ 500 ಕ್ಕೂ ಹೆಚ್ಚು ಹುದ್ದೆಗಳಿಗೆ ಘೋಷಿಸಿರುವ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಈಗ ಅಭ್ಯರ್ಥಿಗಳು ಮಾರ್ಚ್ 21 ರವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ bankofbaroda.in ಗೆ ಭೇಟಿ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಅಭಿಯಾನದಡಿಯಲ್ಲಿ ಒಟ್ಟು 518 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದವರಿಗೆ ಶುಲ್ಕ ಆರುನೂರು ರೂಪಾಯಿ, ಎಸ್.ಸಿ, ಎಸ್.ಟಿ ಅಭ್ಯರ್ಥಿಗಳು ನೂರು ರೂಪಾಯಿ ಕಟ್ಟಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಇಪ್ಪತ್ತೇಳು ವರ್ಷದಿಂದ ಮೂವತ್ತೇಳು ವರ್ಷದ ಒಳಗಿನವರಾಗಿರಬೇಕು. ಪದವಿ, ಸಿಎ, ಬಿಇ, ಎಂಸಿಎ ಹೀಗೆ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಇರಬೇಕಾಗುತ್ತದೆ.