ಬೆಂಗಳೂರು: ಮುಂಗಾರು ಪ್ರವೇಶಕ್ಕೆ ದಿನಗಣನೆ ಆರಂಭವಾಗಿದೆ. ಇದರ ನಡುವೆ ರಾಜ್ಯದ ಹಲವೆಡೆ ಮೇಲೆ ಮೇ 12 ರಿಂದ ಮತ್ತೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳು, ಕರಾವಳಿ ಪ್ರದೇಶದಲ್ಲಿ ಮೇ 12ರಿಂದ ಮುಂದಿನ ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಮಳೆ ಆಗಲಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.
ರಾಜ್ಯದ ಹಲವು ಕಡೆ ಮೇ 8ರಿಂದ 12ರ ವರೆಗೆ ಹಗುರದಿಂದ ಕೂಡಿದ ತುಂತುರು ಮಳೆ ಆಗಲಿದೆ. ಕೆಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ. ಮುಂದಿನ ಐದು ದಿನ ಗರಿಷ್ಠ ತಾಪಮಾನದಲ್ಲಿ ದೊಡ್ಡಮಟ್ಟದ ಬದಲಾವಣೆ ಇರುವುದಿಲ್ಲ ಎಂದು ಹೇಳಲಾಗಿದೆ.