ಬೆಂಗಳೂರು: 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಯಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವಿಶೇಷ ಸಚಿವ ಸಂಪುಟಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ ಎಂದರು.
ಕರ್ನಾಟಕ ಅಗ್ರಿಟೆಕ್ ಮಿಷನ್ 2026 ಅಡಿ ಸ್ಯಾಟಲೈಟ್ ಮೂಲಕ ಹವಾಮಾನ ವಿಶ್ಲೇಷಣೆ ನಡೆಸಿ ಅದರ ಮಾಹಿತಿಯನ್ನು ರೈತರಿಗೆ ಒದಗಿಸುವ ಕೆಲಸ ಮಾಡಲಾಗುವುದು. ಇದರ ಬಗ್ಗೆ ಸಮೀಕ್ಷೆಗೆ ಅಂದಾಜು 36 ಕೋಟಿ ರೂಪಾಯಿ ವೆಚ್ಚದಲ್ಲಿ ಕೃಷಿ ಇಲಾಖೆಗೆ ಅನುಮೋದನೆ ನೀಡಲಾಗಿದೆ. ಹವಾಮಾನಕ್ಕೆ ಅನುಗುಣವಾಗಿ ಬೆಳೆಗಳು, ರೋಗಭಾದೆ ಸೇರಿದಂತೆ ಅನೇಕ ಮಾಹಿತಿಗಳನ್ನು ಇದರ ಮೂಲಕ ನೀಡಲಾಗುವುದು ಎಂದರು.































