ನವದೆಹಲಿ: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಪ್ರತಿಪಕ್ಷಗಳಿಗೆ ತಿಳಿಸಲು ನಾಳೆ ಬೆಳಗ್ಗೆ 11 ಗಂಟೆಗೆ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಆಪರೇಷನ್ ಸಿಂಧೂರ್‌ನಲ್ಲಿ ಏನಾಯಿತು ಮತ್ತು ಪಾಕಿಸ್ತಾನ ಮತ್ತೆ ದಾಳಿ ಮಾಡಿದರೆ ಏನು ಮಾಡಬೇಕು ಎಂಬುದರ ಕುರಿತು ನಾಳಿನ ಸಭೆಯಲ್ಲಿ ನಾಯಕರು ಚರ್ಚೆ ನಡೆಸಲಿದ್ದಾರೆ.
ಪಹಲ್ಗಾಮ್‌ನಲ್ಲಿ ಇಸ್ಲಾಮಿಕ್ ಉಗ್ರರು ನಡೆಸಿದ ಉಗ್ರ ದಾಳಿಗೆ ಪ್ರತಿಕ್ರಿಯೆಯಾಗಿ ಸುಮಾರು ಹದಿನೈದು ದಿನಗಳ ನಂತರ, ಮಂಗಳವಾರ-ಬುಧವಾರದ ಮಧ್ಯರಾತ್ರಿ ಭಾರತವು ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ (PoK) ಭಯೋತ್ಪಾದಕ ಶಿಬಿರಗಳ ವಿರುದ್ಧ ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ನಿಖರವಾದ ದಾಳಿ ನಡೆಸಿದೆ.