ನವದೆಹಲಿ :ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಹುಟ್ಟಿದ ದಿನ ಏ.14 ರಂದು ದೇಶದಲ್ಲಿರುವ ಕೇಂದ್ರದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.
ಅಂಬೇಡ್ಕರರ ಜಯಂತಿ ದಿನದಂದು ರಾಷ್ಟ್ರೀಯ ರಜೆ ಇರಲಿದೆ. ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಘೋಷಣೆ ಮಾಡಿದ್ದಾರೆ. ಸಮಾಜದಲ್ಲಿ ಸಮಾನತೆಯ ಹೊಸ ಯುಗವನ್ನು ಸ್ಥಾಪಿಸಿದ ಸಂವಿಧಾನ ಶಿಲ್ಪಿ, ನಮ್ಮ ಬಾಬಾ ಸಾಹೇಬ್ ಪೂಜ್ಯ ಡಾ. ಭೀಮರಾವ್ ಅಂಬೇಡ್ಕರ್ ಜಿ ಅವರ ಜನ್ಮ ವಾರ್ಷಿಕೋತ್ಸವದಂದು ಈಗ ಸಾರ್ವಜನಿಕ ರಜೆ ಇರುತ್ತದೆ. ಬಾಬಾ ಸಾಹೇಬರ ಕಟ್ಟಾ ಅನುಯಾಯಿ, ಗೌರವಾನ್ವಿತ ಪ್ರಧಾನಿ ಜಿ ಅವರು ಈ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ರಾಷ್ಟ್ರದ ಭಾವನೆಗಳನ್ನು ಗೌರವಿಸಿದ್ದಾರೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.
ಭಾರತದಾದ್ಯಂತ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು ಏಪ್ರಿಲ್ 14 ರ ಸೋಮವಾರದಂದು ಮುಚ್ಚಲಿವೆ. ಈ ನಿರ್ಧಾರದ ಬಗ್ಗೆ ಸಂಬಂಧಪಟ್ಟ ಎಲ್ಲರಿಗೂ ತಿಳಿಸಲು ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೂಚಿಸಲಾಗಿದೆ.