ಏ.01 ರಿಂದ ನರೇಗಾ ಯೋಜನೆಯಡಿ ನೀಡುತ್ತಿದ್ದ ಕೂಲಿಯು 370/- ರೂ. ಗೆ ಹೆಚ್ಚಳವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದ್ದಾರೆ.
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೂಲಿ ನೀಡುತ್ತಿರುವ 349/-ರೂ. ಗಳಿಂದ 370/- ರೂ. ಗಳಿಗೆ ಹೆಚ್ಚಿಸಲಾಗಿದೆ. ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೆಲಸ ನೀಡಲಾಗುವುದು.
ಏ.1ರಿಂದ ಅನ್ವಯವಾಗುವಂತೆ ಪಾವತಿಸಲು ಕೇಂದ್ರ ಸರ್ಕಾರ ಆದೇಶ ನೀಡಿದೆ. ಗ್ರಾಮದ ಬಡ ಕೂಲಿ ಕಾರ್ಮಿಕರು ನಮೂನೆ-6 ರಲ್ಲಿ ಅರ್ಜಿಯನ್ನು ಗ್ರಾಮ ಪಂಚಾಯತಿಗೆ ಸಲ್ಲಿಸಿ, ಕೂಲಿ ಕೆಲಸವನ್ನು ತಮ್ಮ ಗ್ರಾಮದಲ್ಲೇ ಪ್ರತಿ ಕುಟುಂಬವು 100 ದಿನಗಳವರೆಗೆ ನರೇಗಾ ಕೆಲಸದಲ್ಲಿ ಭಾಗವಹಿಸುವಂತೆ ಅವರು ತಿಳಿಸಿದ್ದಾರೆ.