ಸಾಹಸ ಸಿಂಹ ವಿಷ್ಣುವರ್ಧನ್ ಜೊತೆ ವಿಷ್ಟು ವಿಜಯ ಚಿತ್ರದಲ್ಲಿ ನಟಿಸಿದ ಬಾಲಿವುಡ್ ಹಾಗೂ ದಕ್ಷಿಣ ಸಿನಿಮಾದಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ನಟಿ ಮಮತಾ ಕುಲಕರ್ಣಿ ಇದೀಗ ಲೌಕಿಕ ಜಗತ್ತನ್ನು ತೊರೆದು ಆಧ್ಯಾತಿಕ ಜಗತ್ತಿಗೆ ಇಳಿದಿದ್ದಾರೆ.
ಕನ್ನಡದ ವಿಷ್ಣುವಿಜಯ ಸೇರಿದಂತೆ ಹಲವು ಹಿಂದಿ, ತೆಲುಗು, ಮಲಯಾಳಂ, ತಮಿಳು ಸಿನಿಮಾಗಳಲ್ಲಿ ನಟಿಸಿದ್ದ, 90ರ ದಶಕದಲ್ಲಿ ಹಾಟ್ ನಟಿಯಾಗಿ ಗುರುತಿಸಿಕೊಂಡಿದ್ದ ಮಮತಾ ಕುಲಕರ್ಣಿ ಈಗ ಸಾಧ್ವಿ ಆಗಿದ್ದಾರೆ.ಮಮತಾ ಕುಲಕರ್ಣಿ ಹೆಸರನ್ನು ಬದಲಿಸಿಕೊಂಡು ಮಾಯಿ ಮಮತಾ ನಂದಗಿರಿ ಎಂದು ನಾಮಕರಣ ಮಾಡಿಕೊಂಡಿದ್ದಾರೆ.
ಮಹಾಕುಂಭಮೇಳದಲ್ಲಿ ಬಾಗಿಯಾಗಿರುವ ನಟಿ, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಇವರಿಗೆ ಕಿನ್ನರ ಅಖಾಡದ ಆಚಾರ್ಯ ಮಹಾಮಂಡಲೇಶ್ವರ ಲಕ್ಷಿ ನಾರಾಯಣ ತ್ರಿಪಾಠಿ ದೀಕ್ಷೆ ನೀಡಿದರು. ವಿಷ್ಣುವರ್ಧನ್ ಹಾಗೂ ಬಾಲಿವುಡ್ ನಟ ಅಕ್ಷಯ್ ಕುಮಾರ್ ಒಟ್ಟಿಗೆ ನಟಿಸಿದ್ದ ವಿಷ್ಣು ವಿಜಯ ಕನ್ನಡ ಸಿನಿಮಾದಲ್ಲಿ ನಟಿಸಿದ್ದ ಮಮತಾ ಕುಲಕರ್ಣಿ, 2003 ರಲ್ಲಿ ಬೆಂಗಾಲಿ ಸಿನಿಮಾ ಒಂದರಲ್ಲಿ ನಟಿಸಿದ್ದ ಮಮತಾ ಕುಲಕರ್ಣಿ ಆ ನಂತರ ಚಿತ್ರರಂಗದಿಂದ ದೂರಾಗಿದ್ದರು. ಈಗ ಒಮ್ಮೆಲೆ ಅಧ್ಯಾತದ ಹಾದಿ ಹಿಡಿದಿದ್ದಾರೆ. 2016 ರಲ್ಲಿ ಈ ನಟಿಯ ಹೆಸರು ಮಾದಕ ವಸ್ತು ಸಾಗಣೆ ಪ್ರಕರಣದಲ್ಲಿ ಕೇಳಿ ಬಂದಿತ್ತು. ಮುಂಬೈ ಪೊಲೀಸರು ನಟಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮಾಡಿದ್ದರು.