ವಿಜಯನಗರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ನಡೆದ ‘ಸಮರ್ಪಣೆ ಸಂಕಲ್ಪ ಸಮಾವೇಶ’ದಲ್ಲಿ ಮಾತನಾಡಿದ ಡಿಕೆಶಿ, ಮೊದಲು ಐದು ಗ್ಯಾರಂಟಿ, ಈಗ ಹಕ್ಕು ಪತ್ರ ಮೂಲಕ ಆರನೇ ಗ್ಯಾರಂಟಿ ನೀಡಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರೋವರೆಗೆ ಗ್ಯಾರಂಟಿ ಸ್ಕೀಮ್ ನಿಲ್ಲೋದಿಲ್ಲ. ಬಡವರು ಹಕ್ಕು ಪತ್ರ ಇಲ್ಲದೇ ಪರದಾಟ ಮಾಡುವ ಜನರಿಗಾಗಿ ಈ ಕಾರ್ಯಕ್ರಮ. ಈ ಸ್ವತ್ತು ಮೂಲಕ ಏಳನೇ ಗ್ಯಾರಂಟಿ ಕೂಡ ನೀಡುತ್ತಿದ್ದೇವೆ ಎಂದು ಭರವಸೆ ನೀಡಿದ್ದಾರೆ.
ಇದೇ ವೇಳೆ ಎರಡು ವರ್ಷದ ಹಿಂದೆ ಸಿದ್ದರಾಮಯ್ಯ ಮತ್ತು ನನ್ನ ಮೇಲೆ ಭರವಸೆ ಇಟ್ಟು ಮತ ಹಾಕಿದ್ದೀರಿ. 136 ಸ್ಥಾನ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದು ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.