ಚಿತ್ರದುರ್ಗ: ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ತುರುವನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದು ಮೇ 25ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ತುರುವನೂರು ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎನ್.ಜೆ.ವೈ ಮತ್ತು ಐ.ಪಿ. ಮಾರ್ಗಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಐ.ಪಿ. ಮಾರ್ಗಗಳಿಗೆ ಸಮಯ 10 ರ ಒಳಗೆ ವಿದ್ಯುತ್ ಸರಬರಾಜು ಮಾಡಲಾಗುವುದು.
ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು: 66/11 ಕೆವಿ ತುರುವನೂರು ವಿವಿ ಕೇಂದ್ರದಿಂದ ಸರಬರಾಜಾಗುವ 11ಕೆವಿ ಮಾರ್ಗಗಳಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ. ಎಫ್-5 ತುರುವನೂರು ಎನ್.ಜೆ.ವೈ, ಮತ್ತು ಎಫ್-9 ಪೇಲೂರಹಟ್ಟಿ ಎನ್.ಜೆ.ವೈ ಮಾರ್ಗ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: 66/11 ಕೆವಿ ತುರುವನೂರು ವ್ಯಾಪ್ತಿಯ ತುರುವನೂರು, ಕೂನಬೇವು, ಬೆಳಗಟ್ಟ, ಕಡಬನಕಟ್ಟೆ, ಪೇಲೂರಹಟ್ಟಿ, ಗೋನೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದಾರೆ.