ದಕ್ಷಿಣ ಕನ್ನಡ: ಮಂಗಳೂರಿನ ಡಿಪೋದ ಕೆಎಸ್‌ಆರ್‌ಟಿಸಿ ಬಸ್ ತಲಪಾಡಿ ಬಸ್ ನಿಲ್ದಾಣದಲ್ಲಿ ಆಟೋಗೆ ಡಿಕ್ಕಿಯಾಗಿ 5 ಜನ ಸಾವನ್ನಪ್ಪಿದ್ದರು.
ಇದೀಗ ಮಾಧ್ಯಮಗಳಿಗೆ ಸಿಕ್ಕಿರುವ ಸಿಸಿಟಿವಿ ಕ್ಯಾಮೆರಾದ ವಿಡಿಯೋ ದೃಶ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಇಳಿಜಾರಿನಲ್ಲಿ ಹಿಂದಕ್ಕೆ ಬಂದು ನಿಂತಿದ್ದ ಹಿಂಬದಿಯಿಂದಲೇ ಜೋರಾಗಿ ಗುದ್ದಿರುವುದು ಕಾಣುತ್ತದೆ. ಆದರೆ, ಹೀಗೆ ಹಿಂದಕ್ಕೆ ಬರುತ್ತಿರುವ ಬಸ್ಸಿನಲ್ಲಿ ಡ್ರೈವರ್ರೇ ಇರಲಿಲ್ಲ ಎಂಬುದನ್ನು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಅತಿ ವೇಗವಾಗಿ ಹೋಗುವಾಗ ರಸ್ತೆಗೆ ಅಡ್ಡ ಬಂದ ಆಟೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ವಾಹನದ ಬ್ರೇಕ್ ಹಾಕಿದ್ದಾರೆ. ಆದರೆ, ಅಷ್ಟರಲ್ಲಿ ಬಸ್-ಆಟೋಗೆ ಗುದ್ದಿದ್ದು, ಸ್ಕಿಡ್ ಆಗಿ ತಿರುಗಿ ನಿಂತಿದೆ. ಆಗ ಬಸ್ಸಿನ ಡ್ರೈವರ್ ಸೀಟಿನಿಂದ ಇಳಿದು ಓಡಿ ಹೋಗಿದ್ದಾನೆ. ಆದರೆ, ಬಸ್ ಇಳಿಜಾರು ರಸ್ತೆಯಲ್ಲಿ ನಿಂತಿದ್ದರಿಂದ ಹಿಮ್ಮುಖವಾಗಿ ಚಲಿಸಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಮತ್ತೊಂದು ಅಟೋ ಮತ್ತು ಬಸ್ಸಿಗೆ ಕಾಯುತ್ತಿದ್ದ ಇತರ ಪ್ರಯಾಣಿಕರಿಗೂ ಡಿಕ್ಕಿ ಹೊಡೆದು ನಿಂತಿದೆ. ಅಂದರೆ, ಎರಡನೇ ಅಪಘಾತ ನಡೆದಾಗ ಬಸ್ಸಿನಲ್ಲಿ ಡ್ರೈವರ್ರೇ ಇರಲಿಲ್ಲ ಎಂದು ನಿಗಮದಿಂದ ತಿಳಿಸಲಾಗಿದೆ.
ಈ ಅಪಘಾತದಲ್ಲಿ ಮುಂದಿನಿಂದ ಡಿಕ್ಕಿಹೊಡೆದ ಅಟೋದಲ್ಲಿ 2 ಜನ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಉಳಿದಂತೆ, ಬಸ್ ಹಿಂದಕ್ಕೆ ಬಂದು ಗುದ್ದಿದ ಸ್ಥಳದಲ್ಲಿ ಆಟೋ ಚಾಲಕ ಸೇರಿ 4 ಜನ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ. ಒಟ್ಟು 6 ಜನರು ಮೃತಪಟ್ಟಿದ್ದು, ಹಿಂಬದಿಯಿಂದ ಡಿಕ್ಕಿಯಾಗಿದ್ದ ವೇಳೆ 2 ಜನ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ