ಕೈರೋ : ಸುಡಾನ್‌ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿದ ಪರಿಣಾಮ ಇಡೀ ಗ್ರಾಮವೇ ನೆಲಸಮಗೊಂಡಿದೆ. ಭೂಕುಸಿತದಲ್ಲಿ 1,000 ಕ್ಕೂ ಹೆಚ್ಚು ಜನರು ಪ್ರಾಣಕಳೆದುಕೊಂಡಿದ್ದಾರೆ. ಈ ಅವಘಡದಲ್ಲಿ ಒಬ್ಬನೇ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾನೆ.
ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮದಲ್ಲಿ ಭಾರಿ ಭೂಕುಸತ ಸಂಭವಿಸಿದೆ. ಗ್ರಾಮದಲ್ಲಿ ಕೆಲ ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗಿತ್ತು. ಅದರ ಬೆನ್ನಲ್ಲೇ ಈ ದುರಂತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್‌ಮೆಂಟ್/ಆರ್ಮಿ (ಎಸ್‌ಎಲ್‌ಎಂ) ಮಾಹಿತಿ ನೀಡಿದೆ.
ಮಣ್ಣು ಮತ್ತು ಅವಶೇಷಗಳ ಅಡಿಯಲ್ಲಿ ಹೂತುಹೋಗಿರುವವರನ್ನು ಹೊರತೆಗೆಯಲು ಸಹಾಯ ಮಾಡುವಂತೆ ವಿಶ್ವಸಂಸ್ಥೆ ಮತ್ತು ಇತರ ನೆರವು ಸಂಸ್ಥೆಗಳಿಗೆ ಮನವಿ ಮಾಡಲಾಗಿದೆ. ಸುಡಾನ್ ಸೈನ್ಯ ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳ ನಡುವಿನ ರಕ್ತಸಿಕ್ತ ಅಂತರ್ಯುದ್ಧದಲ್ಲಿ ಸಿಲುಕಿಕೊಂಡಿದೆ. ಇದು ದೇಶವನ್ನು ವಿಶ್ವದ ಅತ್ಯಂತ ಹೀನಾಯ ಮಾನವೀಯ ಬಿಕ್ಕಟ್ಟಿನಲ್ಲಿ ಮುಳುಗಿಸಿದೆ.