ಮಾಗಡಿ : ರಾಜ್ಯದಲ್ಲಿ ಒಂದು ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ. ಒಂದು ಪಕ್ಷ ಮಾತ್ರ ಬಹುಮತ ಪಡೆದುಕೊಳ್ಳಲಿದೆ. ಈ ಬಾರಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರೋದಿಲ್ಲ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಕೋಡಿಮಠ ಶ್ರೀಗಳು ನುಡಿದ ಭವಿಷ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಕುತೂಹಲ ಕೆರಳಿಸಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ನಾಯಕರುಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಯಾವ ಪಕ್ಷ ಅಧಿಕಾರದ ಗದ್ದುಗೆ ಹಿಡಿಯುತ್ತದೆ ಎಂಬುದು ಕುತುಹಲದ ಪ್ರಶ್ನೆ.!