ರಾಜ್ಯದಲ್ಲಿ ದರೋಡೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೀದರ್ ನಲ್ಲಿ ಬ್ಯಾಂಕ್ ದರೋಡೆ, ಮಂಗಳೂರಿನ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣಗಳ ಬೆನ್ನಲ್ಲೇ ಇದೀಗ ಮತ್ತೊಂದು ದರೋಡೆ ಪ್ರಕರಣ ನಡೆದಿದೆ.
ಹಾಡ ಹಗಲೇ ದರೋಡೆಕೋರರು ಕಾರನ್ನು ಅಡ್ಡಗಟ್ಟಿ ಹಣ ದರೋಡೆ ಮಾಡಿಕೊಂಡು ಹೋಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಉದ್ಯಮಿಯೊಬ್ಬರನ್ನು ಹಿಂಬಾಲಿಸಿಕೊಂಡು ಬಂದ ಮುಸುಕುಧಾರಿ ದರೋಡೆಕೋರರ ಗ್ಯಾಂಗ್ ಕಾರನ್ನು ಅಡ್ದಗಟ್ಟಿ ಹಣ ಕಸಿದುಕೊಂಡು ಇನ್ನೊಂದು ಕಾರಿನಲ್ಲಿ ಪರಾರಿಯಾಗಿದ್ದಾರೆ.

































