ಬೆಂಗಳೂರು; CM ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲೇ ರಾಜ್ಯ ಸಚಿವ ಸಂಪುಟ ವಿಸರ್ಜನೆಯಾಗಿದೆ.
ರಾಜ್ಯ ಸಚಿವ ಸಂಪುಟ ವಿಸರ್ಜನೆಗೊಂಡಿರುವ ಬಗ್ಗೆ ಗೆಜೆಟ್ ಅಧಿಸೂಚನೆ ಪ್ರಕಟವಾಗಿದೆ. ಹೀಗಾಗಿ, ಸಚಿವ ಸಂಪುಟದ ಸಚಿವರಿಗೆ ಹಂಚಿಕೆಯಾಗಿದ್ದ ಸರ್ಕಾರಿ ವಾಹನಗಳನ್ನು ಇದೀಗ ವಾಪಸ್ ತೆಗೆದುಕೊಳ್ಳಲಾಗಿದೆ.
ಆದರಿಂದ ಸರ್ಕಾರಿ ಮಾಜಿ ಶಾಸಕರೆಲ್ಲರೂ ಖಾಸಗಿ ವಾಹನಗಳಿಗೆ ಶಿಫ್ಟ್ ಆಗಿದ್ದಾರೆ. ಇನ್ನೊಂದೆಡೆ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಹಾಕಿದ್ದ ಸರ್ಕಾರಿ ನಾಮಫಲಕಗಳನ್ನು ಕೂಡ ತೆರವುಗೊಳಿಸಲಾಗಿದೆ.





























