ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪರಿಷತ್ ಸದಸ್ಯ ಸಿಟಿ ರವಿ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಸಿಟಿ ರವಿ ಅವರು ತಮ್ಮ ವಿರುದ್ಧದ ಪ್ರಕರಣ ರದ್ದತಿ ಕೋರಿ ಬಿಜೆಪಿ ಪರಿಷತ್ ಸದಸ್ಯ ಸಿಟಿ ರವಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್ನಲ್ಲಿ ಇಂದು ನಡೆಯಿತು. ಈ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ, ವಿಚಾರಣೆಯನ್ನು ಫೆಬ್ರವರಿ 13ಕ್ಕೆ ಮುಂದೂಡಿಕೆ ಮಾಡಿದೆ.
ಸಿಟಿ ರವಿ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದು, ವಿಧಾನ ಪರಿಷತ್ನಲ್ಲಿ ಘಟನೆ ನಡೆದಿರುವುದರಿಂದ ರವಿ ಅವರಿಗೆ ಶಾಸಕಾಂಗ ವಿನಾಯಿತಿ ಇದೆ ಎಂದು ಕೋರ್ಟ್ ಗೆ ತಿಳಿಸಿದರು.