ಮಾಲೂರು: ಕೆಲವು ದಿನಗಳ ಹಿಂದಷ್ಟೇ ಪ್ರವಾಸಕ್ಕೆ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದರು.
ಈ ಸುದ್ದಿ ಮಾಸುವ ಮುನ್ನವೇ ಗೋಕರ್ಣ ಪ್ರವಾಸಕ್ಕೆ ತೆರಳಿದ್ದ ಮಾಲೂರಿನ ಮಾಸ್ತಿಹಳ್ಳ ಪ್ರೌಢಶಾಲಾ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರಿಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಾಲ್ವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಅವರನ್ನು ಮಣಿಪಾಲಕ್ಕೆ ಸಾಗಿಸಲಾಗಿದೆ.