ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿದ್ದಕ್ಕಾಗಿ ಉದ್ರಿಕ್ತ ಗುಂಪೊಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮಣಿಪುರ ಅಧ್ಯಕ್ಷ ಮುಹಮ್ಮದ್ ಅಸ್ಕರ್ ಅಲಿ ಅವರ ಮನೆಗೆ ಬೆಂಕಿ ಹಚ್ಚಿದ ಒಂದು ದಿನದ ನಂತರ, ತೌಬಲ್ ಜಿಲ್ಲಾಡಳಿತವು ಇಡೀ ಲಿಲಾಂಗ್ ವಿಧಾನಸಭಾ ಕ್ಷೇತ್ರದಲ್ಲಿ ಬಿಎನ್‌ಎಸ್‌ಎಸ್ ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದೆ.
ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಡಿಸಿದ ಆದೇಶದಲ್ಲಿ, ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ಮತ್ತು ಸಾರ್ವಜನಿಕರು ಬಂದೂಕುಗಳು, ಕತ್ತಿಗಳು, ಕೋಲುಗಳು, ಕಲ್ಲುಗಳು ಅಥವಾ ಇತರ ಮಾರಕ ಆಯುಧಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.