ಹೊಸದಿಲ್ಲಿ: ಒಂದೊಳ್ಳೆ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಗುಡ್ನ್ಯೂಸ್. ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 400 ಮೆಡಿಕಲ್ ಆಫೀಸರ್ ಹುದ್ದೆಗಳಿವೆ. ಉದ್ಯೋಗದ ಸ್ಥಳ: ದಿಲ್ಲಿಯ ಆರ್ಮಿ ಆಸ್ಪತ್ರೆ. ಎಂಬಿಬಿಎಸ್ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 12.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಒಟ್ಟು 400 ಹುದ್ದೆಗಳಿವೆ. ಈ ಪೈಕಿ ಪುರುಷರಿಗೆ 300 ಮತ್ತು ಮಹಿಳೆಯರಿಗೆ 100 ಹುದ್ದೆಗಳಿವೆ. ಎಎಫ್ಎಂಎಸ್ ಅಧಿಸೂಚನೆ ಪ್ರಕಾರ ದೇಶದ ಯಾವುದೇ ವಿಶ್ವ ವಿದ್ಯಾನಿಲಯದಿಂದ ಎಂಬಿಬಿಎಸ್, ಸ್ನಾತಕೋತ್ತರ ಪದವಿ ಪೂರೈಸಿದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ ಎಂದು ಪ್ರಕಟಣೆ ತಿಳಿಸಿದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್ಲೈನ್. ಮೆರಿಟ್ ಲಿಸ್ಟ್, ಶಾರ್ಟ್ ಲಿಸ್ಟಿಂಗ್, ಮೆಡಿಕಲ್ ಎಕ್ಸಾಮಿನೇಷನ್, ವೈವಾ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಸಂದರ್ಶನ ದಿಲ್ಲಿಯ ಆರ್ಮಿ ಆಸ್ಪತ್ರೆಯಲ್ಲಿ ನಡೆಯಲಿದೆ. ಸಂದರ್ಶನ ನಡೆಯುವ ಸಂಭಾವ್ಯ ದಿನಾಂಕ: ಜೂ. 19. ಆಯ್ಕೆಯಾದವರಿಗೆ 61,300 ರೂ. ಮಾಸಿಕ ವೇತನ ದೊರೆಯಲಿದೆ.
ಹೆಚ್ಚಿನ ವಿವರಗಳಿಗೆ ವೆಬ್ಸೈಟ್ ವಿಳಾಸ: https://join.afms.gov.in/ಗೆ ಭೇಟಿ ನೀಡಿ ಅಥವಾ ದೂರವಾಣಿ ಸಂಖ್ಯೆ: 011-24199857/858ಕ್ಕೆ ಕರೆ ಮಾಡಿ.