ಬೆಂಗಳೂರು : ಕರ್ನಾಟಕದ ಎರಡು ವಿಧಾನಸಭಾ ಉಪಚುನಾವಣೆಗೆ ಬಿಜೆಪಿಯ ಕೇಂದ್ರೀಯ ಆಯ್ಕೆ ಸಮಿತಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
ಯುಗಾದಿಯ ದಿನದಂದು, ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ದಾವಣಗೆರೆಯಲ್ಲಿ ಅಚ್ಚರಿಯ ಅಭ್ಯರ್ಥಿಯ ಘೋಷಣೆಯಾಗಿದೆ. ಬಾಗಲಕೋಟೆಯಿಂದ ವೀರಭದ್ರಯ್ಯ ಚರಂತಿಮಠ ಮತ್ತು ದಾವಣಗೆರೆ ದಕ್ಷಿಣದಿಂದ ಶ್ರೀನಿವಾಸ ಟಿ ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.































